ಸಿಡ್ನಿ: ಟೀಂ ಇಂಡಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಬುಟ್ಟಾ ಬೊಮ್ಮ ಹಾಡಿಗೆ ಸ್ಟೆಪ್ ಹಾಕಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸಿಡ್ನಿಯಲ್ಲಿ ಶುಕ್ರವಾರ ನಡೆದ ಪಂದ್ಯದ ಫಿಲ್ಡಿಂಗ್ ವೇಳೆ ಬೌಂಡರಿ ಲೈನ್‌ನಲ್ಲಿ ನಿಂತಿದ್ದ ಡೇವಿಡ್ ವಾರ್ನರ್ ' ಬುಟ್ಟಾ ಬೊಮ್ಮ' ಹಾಡಿಗೆ ಹೆಜ್ಜೆ ಹಾಕಿದ್ದಾರೆ. 'ಅಲಾ ವೈಕುಂಠಪುರಮುಲೋ' ಚಿತ್ರದ ಈ ಹಾಡನ್ನು ಖ್ಯಾತ ಗಾಯಕ ಅರ್ಮಾನ್ ಮಲಿಕ್ ಹಾಡಿದ್ದಾರೆ. ಈ ಹಾಡು ಅಭಿಮಾನಿಗಳ ಮನ ಗೆದ್ದಿದೆ. ಡೇವಿಡ್ ವಾರ್ನರ್ ಈ ಮೊದಲು ಇದೇ ಹಾಡಿಗೆ ಸ್ಟೆಪ್ ಹಾಕಿದ್ದ ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದರು.
PublicNext
28/11/2020 05:39 pm