ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮತ್ತೆರಡು ವಿಶೇಷ ಮೈಲಿಗಲ್ಲು ಸ್ಥಾಪಿಸಿದ ವಿರಾಟ್

ಸಿಡ್ನಿ: ಕ್ರಿಕೆಟ್‌ ಇತಿಹಾಸದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ದಾಖಲೆ, ಮೈಲಿಗಲ್ಲು ಸ್ಥಾಪಿಸಿದ್ದಾರೆ. ಇಂದು ಮತ್ತೆರಡು ವಿಶೇಷ ಸಾಧನೆಯನ್ನು ವಿರಾಟ್ ಮಾಡಿದ್ದಾರೆ.

ಸಿಡ್ನಿ ಕ್ರಿಕೆಟ್ ಗ್ರೌಂಡ್​​ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಮೈದಾನಕ್ಕೆ ಇಳಿಯುತ್ತಿದ್ದಂತೆ ಕೊಹ್ಲಿ ಮಹತ್ವದ ಮೈಲುಗಲ್ಲೊಂದನ್ನು ದಾಖಲಿಸಿದರು. ಈ ಪಂದ್ಯದ ಮೂಲಕ ಕೊಹ್ಲಿ 250ನೇ ಅಂತರಾಷ್ಟ್ರೀಯ ಏಕದಿನ ಪಂದ್ಯವನ್ನಾಡಿದ್ದು, ಈ ಸಾಧನೆ ಮಾಡಿದ 8ನೇ ಭಾರತೀಯ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ.

ಟೀಂ ಇಂಡಿಯಾ ಪರ ಅತೀ ಹೆಚ್ಚು ಏಕದಿನ ಪಂದ್ಯಗಳನ್ನು ಆಡಿದ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದೆ. ಸಚಿನ್ 463 ಏಕದಿನ ಪಂದ್ಯಗಳನ್ನು ಆಡಿದ್ದರೆ, ಮಹೇಂದ್ರ ಸಿಂಗ್ ಧೋನಿ 347ಪಂದ್ಯಗಳಲ್ಲಿ ಕಣಕ್ಕಿಳಿಯುವ ಮೂಲಕ 2ನೇ ಸ್ಥಾನದಲ್ಲಿದ್ದಾರೆ. 3ನೇ ಸ್ಥಾನದಲ್ಲಿ ರಾಹುಲ್ ದ್ರಾವಿಡ್ (340 ಪಂದ್ಯ), ಮೊಹಮ್ಮದ್ ಅಜರುದ್ಧೀನ್ (334 ಪಂದ್ಯ) 4ನೇ ಹಾಗೂ ಸೌರವ್ ಗಂಗೂಲಿ( 308 ಪಂದ್ಯ) 5ನೇ ಸ್ಥಾನದಲ್ಲಿದ್ದಾರೆ. ಹಾಗೆಯೇ ಯುವರಾಜ್ ಸಿಂಗ್ (301 ಪಂದ್ಯ) ಹಾಗೂ ಅನಿಲ್ ಕುಂಬ್ಳೆ (269 ಪಂದ್ಯ) ಅವರು ಈ ಪಟ್ಟಿಯಲ್ಲಿದ್ದಾರೆ.

ಅಷ್ಟೇ ಅಲ್ಲದೆ ವಿರಾಟ್ ಇಂದಿನ ಪಂದ್ಯದಲ್ಲಿ 23 ರನ್ ಪೂರೈಸಿದ ವೇಳೆಗೆ ಏಕದಿನ ಕ್ರಿಕೆಟ್​ನಲ್ಲಿ ಅತಿ ವೇಗವಾಗಿ 12 ಸಾವಿರ ರನ್ ಪೂರೈಸಿದ ಬ್ಯಾಟ್ಸ್​ಮನ್ ಎಂಬ ವಿಶ್ವ ದಾಖಲೆ ವಿರಾಟ್ ಕೊಹ್ಲಿ ಪಾಲಾಗಲಿದೆ.

Edited By : Vijay Kumar
PublicNext

PublicNext

29/11/2020 06:23 pm

Cinque Terre

87.09 K

Cinque Terre

5

ಸಂಬಂಧಿತ ಸುದ್ದಿ