ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ ಆತಿಥೇಯ ಆಸ್ಟ್ರೇಲಿಯಾಗೆ ಬೃಹತ್ ಗುರಿಯನ್ನು ನೀಡಿದೆ.
302 ರನ್ ಗಳಿಸಿರುವ ಭಾರತ ಗೆಲ್ಲುವ ವಿಶ್ವಾಸದಲ್ಲಿದೆ.
ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜ ಅವರ ಬಿರುಸಿನ ಬ್ಯಾಟಿಂಗ್, ಅರ್ಧಶತಕಗಳ ನೆರವಿನಿಂದ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಯ ಮೂರನೇ ಹಾಗೂ ಕೊನೆಯ ಪಂದ್ಯದಲ್ಲಿ ಭಾರತ ತಂಡವು ಸವಾಲಿನ ಮೊತ್ತ ಸೇರಿಸುವಲ್ಲಿ ಯಶಸ್ವಿಯಾಗಿದೆ.
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ತಂಡ ನಿಗದಿತ 50 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 302 ರನ್ ಗಳಿಸಿದೆ.
ಆಸ್ಟ್ರೇಲಿಯಾಗೆ 303 ಗೆಲುವಿನ ಗುರಿ ನೀಡಿದೆ.
PublicNext
02/12/2020 01:39 pm