ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮತ್ತೊಮ್ಮೆ ಮಾಸ್ಟರ್‌ ಬ್ಲಾಸ್ಟರ್‌ರನ್ನ ಹಿಂದಿಕ್ಕಿದ ವಿರಾಟ್

ಕ್ಯಾನ್ಬೆರಾ: ರನ್ ಮೆಷಿನ್ ಖ್ಯಾತಿಯ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕ್ರಿಕೆಟ್ ದಂತಕಥೆ, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದ್ದ ಮತ್ತೊಂದು ದಾಖಲೆಯನ್ನ ಹಿಂದಿಕ್ಕಿ ವಿಶ್ವದಾಖಲೆ ಬರೆದಿದ್ದಾರೆ.

ಏಕದಿನ ಕ್ರಿಕೆಟ್‌ನಲ್ಲಿ ಈವರೆಗೂ ವೇಗವಾಗಿ 12 ಸಾವಿರ ರನ್‌ಗಳ ಗಡಿಯನ್ನು ದಾಟಿದ ಬ್ಯಾಟ್ಸ್‌ ಮನ್‌ಗಳ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್‌ ಅವರು ಅಗ್ರಸ್ಥಾನಲ್ಲಿದ್ದರು. ಆದರೆ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಪಂದ್ಯದಲ್ಲಿ 23 ರನ್‌ ಗಳಿಸುವ ಮೂಲಕ ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

ಸಚಿನ್ ತೆಂಡೂಲ್ಕರ್‌ ಅವರು 300 ಇನ್ನಿಂಗ್ಸ್‌ಗಳಲ್ಲಿ 12 ಸಾವಿರ ಏಕದಿನ ರನ್ ಗಳಿಸಿದ್ದರೆ, ವಿರಾಟ್ 251 ಪಂದ್ಯಗಳ 242 ಇನ್ನಿಂಗ್ಸ್‌ಗಳಲ್ಲಿ 12 ಸಾವಿರ ರನ್‌ ಪೂರ್ಣಗೊಳಿಸಿದ್ದಾರೆ. ಉಳಿದಂತೆ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ 314 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದರೆ, ಶ್ರೀಲಂಕಾದ ಮಾಜಿ ನಾಯಕ ಕುಮಾರ ಸಂಗಕ್ಕಾರ 336 ಇನ್ನಿಂಗ್ಸ್, ಸನತ್ ಜಯಸೂರ್ಯ 379 ಇನ್ನಿಂಗ್ಸ್ ಮತ್ತು ಮಹೇಲಾ ಜಯವರ್ಧನೆ 399 ಇನ್ನಿಂಗ್ಸ್ ಗಳಲ್ಲಿ 12 ಸಾವಿರ ರನ್‌ಗಳ ಗಡಿ ದಾಟಿದ್ದರು.

Edited By : Vijay Kumar
PublicNext

PublicNext

02/12/2020 02:51 pm

Cinque Terre

53.34 K

Cinque Terre

0

ಸಂಬಂಧಿತ ಸುದ್ದಿ