ಕ್ಯಾನ್ಬೆರಾ: ಭಾರತ ಕ್ರಿಕೆಟ್ ತಂಡ ಸದ್ಯ ಆಸ್ಟ್ರೇಲಿಯಾ ಪ್ರವಾಸದಲ್ಲಿದೆ. ಅಲ್ಲಿ ನಡೆದ ಓಡಿಐ ಸರಣಿಯಲ್ಲಿ ಸೋಲುಂಡ ವಿರಾಟ್ ಕೊಹ್ಲಿ ನಾಯಕತ್ವದ ಭಾರತ ತಂಡ ಶುಕ್ರವಾರ ಮೂರು ಪಂದ್ಯಗಳ ಟಿ20 ಸರಣಿಯ ಮೊದಲನೇ ಹಣಾಹಣಿಯಲ್ಲಿ ಆರೋನ್ ಫಿಂಚ್ ಬಳಗವನ್ನು ಎದುರಿಸಲು ಸಜ್ಜಾಗಿದೆ.
2021ರ ಟಿ20 ವಿಶ್ವಕಪ್ ಟೂರ್ನಿ ಸಮೀಪವಾಗುತ್ತಿರುವ ಹಿನ್ನೆಲೆಯಲ್ಲಿ ತಂಡದ ಸಂಯೋಜನೆಯನ್ನು ಇನ್ನಷ್ಟು ಉತ್ತಮ ಪಡಿಸಿಕೊಳ್ಳುವ ಉದ್ದೇಶವನ್ನು ಭಾರತ ತಂಡ ಹೊಂದಿದೆ.
ಮನುಕಾ ಓವಲ್ ಅಷ್ಟೊಂದು ದೊಡ್ಡ ಅಂಗಳವಾಗಿರುವುದರಿಂದ ಟಿ20 ಪಂದ್ಯದಲ್ಲಿ ಹೆಚ್ಚು ರನ್‌ಗಳನ್ನು ಗಳಿಸಲು ಸಾಧ್ಯವಾಗುವುದಿಲ್ಲ ಎಂಬುದು ಹಿಂದಿನ ಪಂದ್ಯಗಳಿಂದ ಅರಿವಾಗುತ್ತದೆ. ಪಾಕಿಸ್ತಾನದ ವಿರುದ್ಧ ಕೊನೆಯ ಪಂದ್ಯದಲ್ಲಿ ಆಸ್ಟ್ರೇಲಿಯಾ 150 ರನ್‌ಗಳ ಗುರಿಯನ್ನು ಮುಟ್ಟಿತ್ತು. ಈ ಪಂದ್ಯದಲ್ಲಿ ಸ್ಟೀವನ್ ಸ್ಮಿತ್ ಗರಿಷ್ಠ ಮೊತ್ತ ದಾಖಲಿಸಿದ್ದರು.
ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ ಇಲೆವೆನ್:
ಆಸ್ಟ್ರೇಲಿಯಾ: ಆರೋನ್ ಫಿಂಚ್(ನಾಯಕ), ಡಿ'ಆರ್ಸಿ ಶಾರ್ಟ್, ಸ್ಟೀವ್ ಸ್ಮಿತ್, ಮಾರ್ನಸ್ ಲಾಬುಶೇನ್/ ಕ್ಯಾಮೆರಾನ್ ಗ್ರೀನ್, ಗ್ಲೆನ್ ಮ್ಯಾಕ್ಸ್‌ವೆಲ್, ಅಲೆಕ್ಸ್ ಕೇರಿ(ವಿ.ಕೀ), ಆಷ್ಟನ್ ಅಗರ್, ಶಾನ್ ಅಬಾಟ್, ಮಿಚೆಲ್ ಸ್ಟಾರ್ಕ್. ಡೇನಿಯಲ್ ಸ್ಯಾಮ್ಸ್, ಜಾಶ್ ಹೇಜಲ್‌ವುಡ್, ಆಡಂ ಝಾಂಪ
ಭಾರತ:
ವಿರಾಟ್ ಕೊಹ್ಲಿ(ನಾಯಕ), ಶಿಖರ್ ಧವನ್, ಕೆ.ಎಲ್ ರಾಹುಲ್(ವಿ.ಕೀ), ಹಾರ್ದಿಕ್ ಪಾಂಡ್ಯ, ಮನೀಶ್ ಪಾಂಡೆ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ದೀಪಕ್ ಚಹರ್/ಟಿ ನಟರಾಜನ್, ಜಸ್‌ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ, ಯುಜ್ವೇಂದ್ರ ಚಹಲ್.
PublicNext
04/12/2020 07:47 am