ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಾಯಕನಾಗಿ ಮತ್ತೊಂದು ಮೈಲಿಗಲ್ಲು ಬರೆದ ವಿರಾಟ್

ಸಿಡ್ನಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಂಡದ ಪರವಾಗಿ ವಿಶೇಷ ಸಾಧನೆಯನ್ನು ಮಾಡಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ಭಾನುವಾರ ನಡೆದ ಟಿ20 ಪಂದ್ಯದಲ್ಲಿ ಗೆಲುವು ದಾಖಲಿಸುವ ಮೂಲಕ ಹೊಸ ಮೈಲುಗಲ್ಲು ನೆಟ್ಟಿದ್ದಾರೆ. ವಿರಾಟ್ ಕೊಹ್ಲಿ ನಾಯಕನಾಗಿ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ದೇಶಗಳಲ್ಲಿ ಟಿ20 ಸರಣಿಯನ್ನು ಗೆದ್ದ ಮೊದಲ ಟೀಂ ಇಂಡಿಯಾ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಕೊಹ್ಲಿ ನೇತೃತ್ವದ ಭಾರತ ಈ ವರ್ಷದ ಆರಂಭದಲ್ಲಿ ನ್ಯೂಜಿಲೆಂಡ್‌ನಲ್ಲಿ ಟಿ20 ಸರಣಿಯನ್ನು ಗೆದ್ದಿತ್ತು. ಎರಡು ವರ್ಷಗಳ ಹಿಂದೆ ಇಂಗ್ಲೆಂಡ್‌ನಲ್ಲಿ 2-1 ಸರಣಿ ಗೆಲುವು ದಾಖಲಿಸಿದ್ದರು.

Edited By : Vijay Kumar
PublicNext

PublicNext

07/12/2020 07:32 am

Cinque Terre

44.03 K

Cinque Terre

0