ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆಸೀಸ್ ಪಡೆಗೆ ವೈಟ್‌ವಾಶ್ ಭೀತಿ- ಟೀಂ ಇಂಡಿಯಾಗೆ 187 ರನ್‌ಗಳ ಗುರಿ

ಸಿಡ್ನಿ: ಮ್ಯಾಥ್ಯೂ ವೇಡ್ ಹಾಗೂ ಗ್ಲೆನ್‌ ಮ್ಯಾಕ್ಸ್​ವೆಲ್ ಸ್ಫೋಟಕ ಬ್ಯಾಟಿಂಗ್‌ನಿಂದ ಆಸ್ಟ್ರೇಲಿಯಾ ತಂಡವು ಟೀಂ ಇಂಡಿಯಾಗೆ 187 ರನ್‌ಗಳ ಬೃಹತ್‌ ಮೊತ್ತದ ಗುರಿ ನೀಡಿದೆ.

ಸಿಡ್ನಿ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆಯುತ್ತಿರುವ ಟಿ20 ಸರಣಿಯ ಕೊನೆಯ ಹಾಗೂ ಮೂರನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆಸೀಸ್ ಪಡೆ 5 ವಿಕೆಟ್‌ಗಳ ನಷ್ಟಕ್ಕೆ 186 ರನ್‌ ಪೇರಿಸಿದೆ. ಆಸ್ಟ್ರೇಲಿಯಾ ಪರ ಮ್ಯಾಥ್ಯೂ ವೇಡ್ 80 ರನ್ (53 ಎಸೆತ, 7 ಬೌಂಡರಿ, 2 ಸಿಕ್ಸರ್) ಹಾಗೂ ಗ್ಲೆನ್‌ ಮ್ಯಾಕ್ಸ್​ವೆಲ್ 54 ರನ್ (36 ಎಸೆತ, 3 ಬೌಂಡರಿ, 3 ಸಿಕ್ಸರ್) ಚಚ್ಚಿದರು. ನಾಯಕ ಆ್ಯರೋನ್ ಫಿಂಚ್ ಎರಡು ಎಸೆತಗಳನ್ನು ಎದುರಿಸಿ ಒಂದೇ ಒಂದು ರನ್ ಗಳಿಸದೆ ವಿಕೆಟ್‌ ಕಳೆದುಕೊಂಡರು. ಕೊನೆಯಲ್ಲಿ ಡಾರ್ಸಿ ಶಾರ್ಟ್​ 7 ರನ್, ಮೊಯ್​ಸೆಸ್ ಹೆನ್ರಿಕ್ಯೂಸ್ ಅಜೇಯ 5 ರನ್ ಹಾಗೂ ಡೆನಿಯಲ್ ಸ್ಯಾಮ್ಸ್ ಅಜೇಯ 4 ರನ್ ಗಳಿಸಿದರು.

ಟೀಂ ಇಂಡಿಯಾ ಪರ ವಾಷಿಂಗ್ಟನ್ ಸುಂದರ್ ಪ್ರಮುಖ ಎರಡು ವಿಕೆಟ್‌ ಪಡೆದು ಮಿಂಚಿದರೆ, ಟಿ. ನಟರಾಜನ್ ಹಾಗೂ ಶಾರ್ದೂಲ್ ಠಾಕೂರ್ ತಲಾ ಒಂದು ವಿಕೆಟ್‌ ಕಿತ್ತರು.

Edited By : Vijay Kumar
PublicNext

PublicNext

08/12/2020 03:39 pm

Cinque Terre

53.93 K

Cinque Terre

0

ಸಂಬಂಧಿತ ಸುದ್ದಿ