ಸಿಡ್ನಿ: ನಾಯಕ ವಿರಾಟ್ ಕೊಹ್ಲಿ ಏಕಾಂಗಿ ಹೋರಾಟದ ಸ್ಫೋಟಕ ಬ್ಯಾಟಿಂಗ್ ನಡುವೆಯೂ ಟೀಂ ಇಂಡಿಯಾ ಆಸ್ಟ್ರೇಲಿಯಾದ ವಿರುದ್ಧ 12 ರನ್‌ಗಳಿಂದ ಸೋಲು ಕಂಡಿದೆ.
ಸಿಡ್ನಿ ಕ್ರಿಕೆಟ್ ಗ್ರೌಂಡ್‌ನಲ್ಲಿ ಇಂದು ನಡೆದ ಟಿ20 ಸರಣಿಯ ಕೊನೆಯ ಹಾಗೂ ಮೂರನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿ ಆಸೀಸ್ ಪಡೆ ನೀಡಿದ್ದ 187 ರನ್‌ಗಳ ಗುರಿ ನೀಡಿತ್ತು. ಈ ಟಾರ್ಗೆಟ್ ಬೆನ್ನಟ್ಟಿದ ಭಾರತ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 174 ರನ್ ಗಳಿಸಿ ಸೋಲಿಗೆ ಗುರಿಯಾಯಿತು. ಹಾಗಿದ್ದರೂ ಕೊಹ್ಲಿ ಪಡೆಯು ಮೂರು ಪಂದ್ಯಗಳ ಟಿ20 ಸರಣಿಯನ್ನು 2-1 ಅಂತರದಲ್ಲಿ ವಶಪಡಿಸಿಕೊಂಡಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಆಸ್ಟ್ರೇಲಿಯಾ, ವಿಕೆಟ್ ಕೀಪರ್ ಎಡಗೈ ಆರಂಭಿಕ ಬ್ಯಾಟ್ಸ್‌ಮನ್ ಮ್ಯಾಥ್ಯೂ ವೇಡ್ (80) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ (54) ಬಿರುಸಿನ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 186 ರನ್‌ಗಳ ಬೃಹತ್ ಮೊತ್ತ ಪೇರಿಸಿತ್ತು.
ಬಳಿಕ ಗುರಿ ಬೆನ್ನಟ್ಟಿದ ಭಾರತಕ್ಕೆ ನಾಯಕ ವಿರಾಟ್ ಕೊಹ್ಲಿ (85), ಶಿಖರ್ ಧವನ್ 28 ರನ್ ಹಾಗೂ ಹಾರ್ದಿಕ್ ಪಾಂಡ್ಯ 20 ರನ್ ಗಳಿಸಿದರು. ಆದರೆ ಉಳಿದ ಆಟಗಾರರು ಬ್ಯಾಟಿಂಗ್ ವೈಫಲ್ಯ ತೋರಿದರು. ಪರಿಣಾಮ 20 ಓವರ್‌ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 174 ರನ್ ಗಳಿಸಲಷ್ಟೇ ಶಕ್ತವಾಯಿತು.
PublicNext
08/12/2020 05:41 pm