ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಇದಕ್ಕೆ ನೀನು ಅರ್ಹ'- ನಟರಾಜನ್‌ಗೆ ಸರಣಿಶ್ರೇಷ್ಠ ಪ್ರಶಸ್ತಿ ಹಂಚಿ ಹೃದಯ ಗೆದ್ದ ಹಾರ್ದಿಕ್ ಪಾಂಡ್ಯ

ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯನ್ನು ಟೀಂ ಇಂಡಿಯಾ 2-1 ಅಂತರದಲ್ಲಿ ವಶಪಡಿಸಿಕೊಂಡಿದೆ. ಈ ಸರಣಿಯಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ಹಾರ್ದಿಕ್ ಪಾಂಡ್ಯ ತಮಗೆ ದೊರೆತ ಸರಣಿಶ್ರೇಷ್ಠ ಪುರಸ್ಕಾರವನ್ನು ಯುವ ವೇಗದ ಬೌಲರ್ ತಂಗರಸು ನಟರಾಜನ್‌ಗೆ ಹಂಚುವ ಮೂಲಕ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ.

ಸಹಜವಾಗಿಯೇ ಟಿ20 ಸರಣಿಯಲ್ಲಿ ಶ್ರೇಷ್ಠ ನಿರ್ವಹಣೆ ನೀಡಿರುವ ಹಾರ್ದಿಕ್ ಪಾಂಡ್ಯ ಸರಣಿಶ್ರೇಷ್ಠ ಪ್ರಶಸ್ತಿಗೆ ಭಾಜನವಾಗಿದ್ದರು. ಇನ್ನೊಂದೆಡೆ ತಮ್ಮ ಚೊಚ್ಚಲ ಸರಣಿಯಲ್ಲೇ ಪ್ರಭಾವಿ ಬೌಲಿಂಗ್ ಸಂಘಟಿಸಿರುವ ನಟರಾಜನ್ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಇದರಿಂದ ಹಾರ್ದಿಕ್ ಪಾಂಡ್ಯ ಕೂಡಾ ಹೊರತಾಗಿಲ್ಲ.

ಈ ಬಗ್ಗೆ ಟ್ವೀಟ್ ಮಾಡಿರುವ ಹಾರ್ದಿಕ್ ಪಾಂಡ್ಯ, 'ನಟರಾಜನ್ ಈ ಸರಣಿಯಲ್ಲಿ ನೀವು ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದೀರಿ. ಟೀಂ ಇಂಡಿಯಾಗೆ ಪದಾರ್ಪಣೆ ಮಾಡಿದ ಸರಣಿಯಲ್ಲಿ ಅತ್ಯಂತ ಕಠಿಣ ಪರಿಸ್ಥಿತಿಯಲ್ಲಿ ಅದ್ಭುತ ಪ್ರದರ್ಶನ ನೀಡಿರುವುದು ನಿಮ್ಮ ಪ್ರತಿಭೆ ಹಾಗೂ ಕಠಿಣ ಪರಿಶ್ರಮವನ್ನು ತೋರಿಸುತ್ತದೆ. ನನ್ನ ಕಡೆಯಿಂದ ನೀವು ಸರಣಿಶ್ರೇಷ್ಠ ಪ್ರಶಸ್ತಿಗೆ ಅರ್ಹವಾಗಿದ್ದೀರಿ ಸಹೋದರ' ಎಂದು ಬರೆದುಕೊಂಡಿದ್ದಾರೆ.

Edited By : Vijay Kumar
PublicNext

PublicNext

08/12/2020 11:15 pm

Cinque Terre

48.53 K

Cinque Terre

1

ಸಂಬಂಧಿತ ಸುದ್ದಿ