ಬೆಂಗಳೂರು: ಬೆಂಗಳೂರಿನ ಎನ್ ಸಿಎ ನಲ್ಲಿ ರೋಹಿತ್ ಫಿಟ್ ನೆಸ್ ಪರೀಕ್ಷೆಯಲ್ಲಿ ಪಾಸಾಗಿ ಆಸೀಸ್ ಗೆ ಹಾರಲು ಸಿದ್ದರಾಗಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿದೆ.
ಟೀಂ ಇಂಡಿಯಾದ ಪ್ರಮುಖ ಆಟಗಾರ ರೋಹಿತ್ ಶರ್ಮ ಫಿಟ್ ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಸುದ್ದಿ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಖುಷಿ ತಂದಿದೆ.
ಕಳೆದ ಐಪಿಎಲ್ ವೇಳೆ ಗಾಯಗೊಂಡಿದ್ದ ರೋಹಿತ್ ಶರ್ಮ ನಂತರ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್ ನೆಸ್ ತರಬೇತಿಯಲ್ಲಿದ್ದರು.
ಇಂದು ಅಂತಿಮ ಪರೀಕ್ಷೆ ನಡೆದಿದ್ದು, ಅದರಲ್ಲಿ ರೋಹಿತ್ ಸಂಪೂರ್ಣ ಫಿಟ್ ಆಗಿದ್ದಾರೆ ಎಂದು ವರದಿಯಾಗಿದೆ.
ರೋಹಿತ್ ಶನಿವಾರ ಆಸೀಸ್ ವಿಮಾನ ಏರುವುದು ಬಹುತೇಕ ಖಚಿತವಾಗಿದೆ.
ಆಸೀಸ್ ನಲ್ಲಿ 14 ದಿನಗಳ ಕ್ವಾರಂಟೈನ್ ಕಡ್ಡಾಯವಾಗಿರುವ ಕಾರಣ ರೋಹಿತ್ ಮೊದಲೆರಡು ಟೆಸ್ಟ್ ಪಂದ್ಯಗಳನ್ನು ತಪ್ಪಿಸಿಕೊಳ್ಳಲಿದ್ದಾರೆ.
ಟೆಸ್ಟ್ ಸರಣಿಯ ಮೊದಲ ಪಂದ್ಯ ಡಿ.17ರಂದು ಆರಂಭವಾಗಲಿದೆ.
ಅಡಿಲೇಡ್ ನಲ್ಲಿ ನಡೆಯುವ ಈ ಪಂದ್ಯ ಭಾರತ- ಆಸ್ಟ್ರೇಲಿಯಾ ನಡುವಿನ ಮೊದಲ ಪಿಂಕ್ ಬಾಲ್ ಟೆಸ್ಟ್ ಆಗಿರಲಿದೆ.
PublicNext
11/12/2020 01:43 pm