ದುಬೈ: ಭಾರತದಲ್ಲಿ ನಡೆಯಲಿರುವ 2023ರ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಅರ್ಹತಾ ಪಂದ್ಯಗಳಿಗೆ ಜಿಂಬಾಬ್ವೆ ಆತಿಥ್ಯ ವಹಿಸಲಿದೆ.
2023ರ ಏಕದಿನ ವಿಶ್ವಕಪ್ ಟೂರ್ನಿಯನ್ನು ಅಕ್ಟೋಬರ್–ನವೆಂಬರ್‌ನಲ್ಲಿ ನಡೆಸಲು ನಿರ್ಧರಿಸಲಾಗಿದೆ. ಕೋವಿಡ್–19 ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಪಂದ್ಯಗಳ ವೇಳಾಪಟ್ಟಿಯನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಮಂಗಳವಾರ ಬಿಡುಗಡೆ ಮಾಡಿದೆ. ಹೀಗಾಗಿ ಅರ್ಹತಾ ಪಂದ್ಯಗಳ ವೇಳಾಪಟ್ಟಿಯನ್ನೂ ಪರಿಷ್ಕರಣೆ ಮಾಡಲಾಗಿದ್ದು, 2023ರ ಜೂನ್ 18ರಿಂದ ಜುಲೈ 9ರವರೆಗೆ ಈ ಪಂದ್ಯಗಳು ನಡೆಯಲಿವೆ.
ಟೂರ್ನಿಗೆ ಆತಿಥೇಯ ತಂಡವಾದ ಭಾರತ, ವಿಶ್ವ ಸೂಪರ್ ಲೀಗ್ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಇತರ ಏಳು ತಂಡಗಳೊಂದಿಗೆ ನೇರ ಅರ್ಹತೆ ಗಳಿಸಲಿದೆ. ಸೂಪರ್ ಲೀಗ್ ಪಾಯಿಂಟ್ಸ್ ಪಟ್ಟಿಯಲ್ಲಿ ಕೊನೆಯ ಐದು ಸ್ಥಾನಗಳಲ್ಲಿರುವ ತಂಡಗಳು ಅರ್ಹತಾ ಪಂದ್ಯಗಳಲ್ಲಿ ಸೆಣಸಲಿದ್ದು, ಅಗ್ರಸ್ಥಾನ ಪಡೆಯುವ ಮೂರು ತಂಡಗಳು ವಿಶ್ವಕಪ್‌ಗೆ ಎಂಟ್ರಿ ಕೊಡಲಿವೆ.
PublicNext
16/12/2020 09:08 pm