ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇಂಡೋ, ಆಸೀಸ್ ಟೆಸ್ಟ್ ಪಂದ್ಯವನ್ನ 'ಬಾಕ್ಸಿಂಗ್‌ ಡೇ ಟೆಸ್ಟ್‌' ಎಂದು ಯಾಕೆ ಕರೆಯುತ್ತಾರೆ ಗೊತ್ತಾ?

ಮೆಲ್ಬರ್ನ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯಲಿರುವ ಬಾಕ್ಸಿಂಗ್‌ ಡೇ ಟೆಸ್ಟ್‌ ಪಂದ್ಯವು ಭಾರೀ ಕುತೂಹಲ ಮೂಡಿಸಿದೆ. ಕೊರೊನಾ ಆತಂಕ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಪಂದ್ಯ ವೀಕ್ಷಣೆಗೆ ಹೆಚ್ಚಿನ ಅಭಿಮಾನಿಗಳಿಗೆ ಅವಕಾಶ ನೀಡುವ ಸಾಧ್ಯತೆ ಇದೆ.

ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ನಡೆಯಲಿರುವ ಟೆಸ್ಟ್‌ ಪಂದ್ಯಕ್ಕೆ ಬಾಕ್ಸಿಂಗ್‌ ಡೇ ಎಂದು ಕರೆಯಲು ಕಾರಣವಿದೆ. ಇಂಗ್ಲೆಂಡ್ ಹಾಗೂ ಹಲವು ದೇಶಗಳಲ್ಲಿ ಕ್ರಿಸ್‌ಮಸ್ ಮರುದಿನ ಅಂದರೆ ಡಿಸೆಂಬರ್ 26ರ ರಜಾ ದಿನವನ್ನು ಬಾಕ್ಸಿಂಗ್ ಡೇ ಎಂದು ಕರೆಯಲಾಗುತ್ತದೆ. ಜರ್ಮನಿ, ಪೊಲೆಂಡ್, ರೋಮೆನಿಯಾ, ಹಂಗೇರಿ, ನೆದರ್ಲೆಂಡ್ಸ್ ಸೇರಿದಂತೆ ಕೆಲ ದೇಶಗಳಲ್ಲಿ ಡಿಸೆಂಬರ್ 26ರನ್ನು ಸೆಕೆಂಡ್ ಕ್ರಿಸ್‌ಮಸ್ ಡೇ ಎಂದು ಆಚರಿಸಲಾಗುತ್ತಿದೆ. ಈ ದಿನ ಸಾರ್ವಜನಿಕ ರಜಾ ದಿನವಾಗಿದ್ದು, ಐರ್ಲೆಂಡ್‌ ಹಾಗೂ ಸ್ಪೇನ್‌ನ ಕ್ಯಾಟಲೋನಿಯಾ ರೀಜನ್‌ನಲ್ಲಿ ʼಸೈಂಟ್ ಸ್ಟೀಫನ್ ಡೇʼ ಎಂದು ಕರೆಯಲಾಗುತ್ತದೆ.

ಈ ಹಿಂದೆ ಆಸ್ಟ್ರೇಲಿಯಾ ಬ್ರಿಟಿಷರ ವಸಹತು ಆಗಿತ್ತು. ಈ ಸಮಯದಲ್ಲಿ ಇಂಗ್ಲೆಂಡ್‌ ರಾಜಮನೆತನದವರು ಕ್ರಿಸ್ಮಸ್‌ ಸಮಯದಲ್ಲಿ ಕೆಲಸ ಮಾಡಿದ ನೌಕರರಿಗೆ ಡಿ.26 ರಂದು ಬಾಕ್ಸ್‌ ಮೂಲಕ ಉಡುಗೊರೆ ನೀಡುತ್ತಿದ್ದರು. ಬಾಕ್ಸ್‌ಗಳಲ್ಲಿ ಸಿಹಿ ತಿಂಡಿ ಸೇರಿದಂತೆ ಹಲವು ಉಡುಗೊರೆ ಸಿಗುತ್ತಿದ್ದ ಕಾರಣ ಈ ದಿನಕ್ಕೆ ‘ಬಾಕ್ಸಿಂಗ್‌ ಡೇ’ ಎಂಬ ಹೆಸರು ಬಂತು.

Edited By : Vijay Kumar
PublicNext

PublicNext

20/12/2020 02:43 pm

Cinque Terre

41.28 K

Cinque Terre

1

ಸಂಬಂಧಿತ ಸುದ್ದಿ