ಬಹಳ ಹಿಂದೆ ಕ್ರಿಸ್ಮಸ್ ಸಮಯದಲ್ಲಿ ಶೆಫೀಲ್ಡ್ ಶೀಲ್ಡ್ (ಆಸ್ಟ್ರೇಲಿಯಾದ ಪ್ರಥಮ ದರ್ಜೆ ಕ್ರಿಕೆಟ್) ಕ್ರಿಕೆಟ್ ಟೂರ್ನಿ ವಿಕ್ಟೋರಿಯಾ ಮತ್ತು ನ್ಯೂ ಸೌತ್ ವೇಲ್ಸ್ ತಂಡಗಳ ನಡುವೆ ಮೆಲ್ಬರ್ನ್‌ನಲ್ಲಿ ನಡೆಯುತ್ತಿತ್ತು. 1950-51 ರಲ್ಲಿ ಆಶಸ್ ಸರಣಿ ಡಿಸೆಂಬರ್ 22ರಿಂದ 27ರವರೆಗೆ ಮೆಲ್ಬರ್ನ್ ಅಂಗಳದಲ್ಲಿ ನಡೆದಿತ್ತು. ಈ ಪಂದ್ಯದ ನಾಲ್ಕನೇ ದಿನವನ್ನು(ಡಿ.26) ಬಾಕ್ಸಿಂಗ್ ಡೇ ಎಂದು ಕರೆಯಲಾಗುತ್ತಿತ್ತು. ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ಮೊದಲ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯ ಆಡಿತ್ತು. ಪಂದ್ಯದ ನಾಲ್ಕನೇ ದಿನವಾದ ಬಾಕ್ಸಿಂಗ್ ಡೇ ದಿನ ಬರೋಬ್ಬರಿ 60,486 ಮಂದಿ ಕ್ರಿಕೆಟ್ ವೀಕ್ಷಿಸಿದ್ದರು.
1980ರಲ್ಲಿ ಡಿಸೆಂಬರ್ 22 ರಿಂದ 27ರವರೆಗೆ ನಡೆಯತ್ತಿದ್ದ ಟೆಸ್ಟ್ ಪಂದ್ಯದ ದಿನಾಂಕವನ್ನು ಬದಲಾಯಿಸಿ ಡಿಸೆಂಬರ್ 26ರಂದು ಟೆಸ್ಟ್ ಕ್ರಿಕೆಟ್ ಆಯೋಜಿಸಲು ಮೆಲ್ಬರ್ನ್ ಕ್ರಿಕೆಟ್ ಕ್ಲಬ್ ಹಾಗೂ ಕ್ರಿಕೆಟ್ ಆಸ್ಟ್ರೇಲಿಯಾ ನಿರ್ಧರಿಸಿತು. ಬಳಿಕ ಪ್ರತಿ ವರ್ಷ ಡಿಸೆಂಬರ್ 26ರಂದು ಆಸ್ಟ್ರೇಲಿಯಾ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯ ಆಯೋಜಿಸುತ್ತಿದೆ. ಇಂಗ್ಲೆಂಡ್, ಭಾರತ, ದಕ್ಷಿಣ ಆಫ್ರಿಕಾ, ವೆಸ್ಟ್ ಇಂಡೀಸ್, ನ್ಯೂಜಿಲೆಂಡ್, ಪಾಕಿಸ್ತಾನ ತಂಡಗಳು ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವನ್ನು ಆಡಿದೆ. 1985ರಲ್ಲಿ ಭಾರತ ಮೊದಲ ಬಾಕ್ಸಿಂಗ್ ಡೇ ಟೆಸ್ಟ್ ಆಡಿತ್ತು. ಈ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿತ್ತು.
PublicNext
20/12/2020 05:08 pm