ಮುಂಬೈ: ಮೆಲ್ಬರ್ನ್ ನಲ್ಲಿ ಡಿಸೆಂಬರ್ 26ರಂದು ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್‌ಗೆ ಟೀಂ ಇಂಡಿಯಾ ಪರ ಆಡುವ 11ರ ಬಳಗವನ್ನು ಬಿಸಿಸಿಐ ಪ್ರಕಟಿಸಿದೆ. ಭಾರೀ ನಿರೀಕ್ಷೆ ಮೂಡಿಸಿದ್ದ ಟೆಸ್ಟ್ ಪಂದ್ಯಕ್ಕೆ ಕೆ.ಎಲ್.ರಾಹುಲ್ ಕಮ್‌ಬ್ಯಾಕ್ ಮತ್ತೆ ಹುಸಿಯಾಗಿದೆ. ಈ ಬೆಳವಣಿಗೆ ಭಾರೀ ಅಚ್ಚರಿಗೆ ಮೂಡಿಸಿದೆ.
ಕಳಪೆ ಪಂದ್ಯದ ಎರಡೂ ಇನ್ನಿಂಗ್ಸ್‌ನಲ್ಲೂ ಕಳಪೆ ಬ್ಯಾಟಿಂಗ್ ಪ್ರದರ್ಶನ ತೋರಿದ ಪೃಥ್ವಿ ಶಾ ಅವರನ್ನು ಕೈಬಿಟ್ಟು ಯುವ ಬ್ಯಾಟ್ಸ್‌ಮನ್ ಶುಭ್‌ಮನ್ ಗಿಲ್‌ಗೆ ಮಣೆ ಹಾಕಲಾಗಿದೆ. ಈ ಮೂಲಕ 21ರ ಹರೆಯದ ಗಿಲ್ ಚೊಚ್ಚಲ ಪಂದ್ಯವನ್ನು ಆಡಲು ಸಜ್ಜಾಗಿದ್ದಾರೆ. ಇತ್ತ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಕೂಡ ಟೆಸ್ಟ್ ಕ್ರಿಕೆಟಿಗೆ ಪಾದಾರ್ಪನೆ ಮಾಡಲಿದ್ದಾರೆ.
ತಂಡ ಹೀಗಿದೆ: ಅಜಿಂಕ್ಯ ರಹಾನೆ (ನಾಯಕ), ಮಯಾಂಕ್ ಅಗರ್ವಾಲ್, ಶುಭ್‌ಮನ್ ಗಿಲ್, ಚೇತೇಶ್ವರ ಪೂಜಾರ, ಹನುಮವಿಹಾರಿ, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಆರ್.ಅಶ್ವಿನ್, ಉಮೇಶ್ ಯಾದವ್, ಜಸ್‌ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
PublicNext
25/12/2020 02:38 pm