ಮುಂಬೈ: ಟೀಂ ಇಂಡಿಯಾ ಮಾಜಿ ಸ್ಟಾರ್ ಬ್ಯಾಟ್ಸ್‌ಮನ್ ಸುರೇಶ್ ರೈನಾ ಹಾಗೂ ಬಾಲಿವುಟ್ ನಟ ಹೃತಿಕ್ ರೋಷನ್ ಪತ್ನಿ ಸುಸೇನ್ ಖಾನ್ ಸೇರಿದಂತೆ 34 ಜನರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಕೋವಿಡ್-19 ನಿಯಮವನ್ನು ಗಾಳಿಗೆ ತೂರಿ ಮುಂಬೈ ವಿಮಾನ ನಿಲ್ದಾಣದ ಸಮೀಪದ ಡ್ರಾಗನ್ ಫ್ಲೈ ಕ್ಲಬ್ನಲ್ಲಿ ಸೋಮವಾರ ರಾತ್ರಿ ಪಾರ್ಟಿ ಆಯೋಜಿಸಲಾಗಿತ್ತು. ಈ ಬಗ್ಗೆ ಮಾಹಿತಿ ಪಡೆದ ಮುಂಬೈ ಪೊಲೀಸರು ಮಂಗಳವಾರ ನಸುಕಿನ ಜಾವ ದಾಳಿ ನಡೆಸಿ ಸುರೇಶ್ ರೈನಾ, ಸುಸೇನ್ ಖಾನ್, ಖ್ಯಾತ ಗಾಯಕ ಗುರು ರಾಂಧವ ಸೇರಿದಂತೆ ಒಟ್ಟು 34 ಜನರನ್ನು ಬಂಧಿಸಿದ್ದಾರೆ.
ಬಂಧಿತ 34 ಜನರಲ್ಲಿ 7 ಮಂದಿ ಕ್ಲಬ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದವರು ಎನ್ನಲಾಗಿದೆ. ಮಾಜಿ ಕ್ರಿಕೆಟರ್ ಸುರೇಶ್ ರೈನಾ, ಸುಸೇನ್ ಖಾನ್ ಮತ್ತು ಗುರು ರಾಂಧವ ಅವರನ್ನು ಜಾಮೀನು ಪಡೆದು ಹೊರಬಂದಿದ್ದಾರೆ ಎಂದು ವರದಿಯಾಗಿದೆ.
ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 188, 269, 34ರ ಅಡಿ, ಬಾಂಬೆ ಪೊಲೀಸ್ ಕಾಯ್ದೆ ಮತ್ತು ಸಾಂಕ್ರಾಮಿಕ ರೋಗ ಕಾಯ್ದೆಗಳ ಅಡಿ ಪ್ರಕರಣಗಳನ್ನು ದಾಖಲಿಸಲಾಗಿದೆ.
PublicNext
22/12/2020 01:18 pm