ನವದೆಹಲಿ : ಟೀಂ ಇಂಡಿಯಾ ಯುವ ವೇಗದ ಬೌಲರ್ ಆರ್ಶದೀಪ್ ಸಿಂಗ್ ಅವರ ವಿಕಿಪೀಡಿಯಾ ಪೇಜ್‌ನಲ್ಲಿ ಅವರ ಹೆಸರಿನ ಜತೆಗೆ ಖಲಿಸ್ತಾನಿ ಪದವನ್ನು ಥಳುಕು ಹಾಕಿರುವ ವಿಚಾರವನ್ನು ಭಾರತ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯವು ವಿಕಿಪೀಡಿಯಾದ ಭಾರತದ ಪ್ರತಿನಿಧಿಗೆ ಸಮನ್ಸ್ ಜಾರಿ ಮಾಡಿದೆ.
ಇದಷ್ಟೇ ಅಲ್ಲದೇ ಈ ಕುರಿತಂತೆ ಸ್ಪಷ್ಟನೆ ನೀಡುವಂತೆ ಸೂಚಿಸಿದೆ. ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯದ ಆಪ್ತ ಮೂಲಗಳ ಪ್ರಕಾರ, ಆರ್ಶದೀಪ್ ಸಿಂಗ್ ಅವರ ವಿಕಿಪೀಡಿಯಾ ಪೇಜ್‌ನಲ್ಲಿ ಖಲಿಸ್ತಾನ್ ಲಿಂಕ್ ಅನ್ನು ತಪ್ಪಾಗಿ ಹಾಕಿರುವುದರಿಂದ ದೇಶದಲ್ಲಿ ಕೋಮು ಸಾಮರಸ್ಯ ಕದಡುವ ಸಾಧ್ಯತೆಯಿದೆ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ.
ವಿಕಿಪೀಡಿಯಾ ಪೇಜ್‌ನಲ್ಲಿ ಮಾಡಿದ ಈ ಬದಲಾವಣೆಯಿಂದಾಗಿ ಕಾನೂನು ಸುವ್ಯವಸ್ಥೆಗೆ ತೊಡಕು ಉಂಟಾಗುವ ಸಾಧ್ಯತೆಯಿದೆ ಎಂದು ಮೂಲಗಳು ಅಭಿಪ್ರಾಯಪಟ್ಟಿವೆ.
ಭಾರತ ಕ್ರಿಕೆಟ್ ತಂಡವು ಏಷ್ಯಾಕಪ್ ಟೂರ್ನಿಯ ಸೂಪರ್ 4 ಹಂತದ ಪಂದ್ಯದಲ್ಲಿ ಪಾಕಿಸ್ತಾನ ಎದುರು 5 ವಿಕೆಟ್‌ಗಳ ಅಂತರದ ರೋಚಕ ಸೋಲು ಅನುಭವಿಸಿದ ಬೆನ್ನಲ್ಲೇ ಆರ್ಶದೀಪ್ ವಿಕಿಪೀಡಿಯಾ ಪೇಜ್ ಎಡಿಟ್ ಮಾಡಲಾಗಿದೆ. ಆರ್ಶದೀಪ್ ಸಿಂಗ್ ಅವರ ವಿಕಿಪೀಡಿಯಾ ಪೇಜ್‌ನ ಹಲವು ಕಡೆಗಳಲ್ಲಿ ಅವರನ್ನು ಖಲಿಸ್ತಾನ್ ಆಟಗಾರ ಎಂದು ಎಡಿಟ್ ಮಾಡಿದೆ. ಈ ಸ್ಕ್ರೀನ್‌ಶಾಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದ್ದವು.
PublicNext
06/09/2022 12:50 pm