ಬೆಂಗಳೂರು: ನಗರದ ಹಲವೆಡೆ ನಡೆಯುತ್ತಿದ್ದ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ವಿವಿಧ ಬೆಟ್ಟಿಂಗ್ ಪ್ರಕರಣಗಳಲ್ಲಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ನಗರದ ಹೈಗ್ರೌಂಡ್ಸ್, ಶೇಷಾದ್ರಿಪುರಂ, ಉಪ್ಪಾರಪೇಟೆ, ಜ್ಞಾನಭಾರತಿ ಠಾಣಾ ವ್ಯಾಪ್ತಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಯುತ್ತಿತ್ತು.
ಈ ಕುರಿತ ಖಚಿತ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಐವರು ಆರೋಪಿಗಳನ್ನು ಬಂಧಿಸಲಾಗಿದ್ದು,
₹5 ಲಕ್ಷ ನಗದು ಜಪ್ತಿ ಮಾಡಲಾಗಿದೆ. ಐವರು ಆರೋಪಿಗಳು ಮೊಬೈಲ್ ಮುಖಾಂತರ ಬೆಟ್ಟಿಂಗ್ ನಡೆಸುತ್ತಿದ್ದರು. ಪಂದ್ಯ ನಡೆಯುವ ವೇಳೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ, ಆರೋಪಿಗಳ ವಿರುದ್ಧ ಪ್ರತ್ಯೇಕ ಠಾಣೆಗಳಲ್ಲಿ ಕೇಸ್ ದಾಖಲು ಮಾಡಲಾಗಿದೆ.
PublicNext
29/09/2021 12:09 pm