ಚಂಡೀಗಡ: 17 ವರ್ಷದ ಅಂತರರಾಷ್ಟ್ರೀಯ ಮಟ್ಟದ ಶೂಟರ್ ಪಂಜಾಬ್‌ನ ಫರೀದ್‌ಕೋಟ್‌ನಲ್ಲಿರುವ ತನ್ನ ನಿವಾಸದಲ್ಲಿ ಗುರುವಾರ ಬೆಳಗ್ಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಖುಷ್ ಸೀರತ್ ಕೌರ್ ಸಂಧು ಆತ್ಮಹತ್ಯೆಗೆ ಶರಣಾದ ಶೂಟರ್. ಖುಷ್ ಸೀರತ್ ಕೌರ್ ಅವರು ಅನೇಕ ರಾಷ್ಟ್ರೀಯ ಪದಕಗಳನ್ನು ಗೆದ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ 64ನೇ ರಾಷ್ಟ್ರೀಯ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ತಾನು ನೀಡಿದ ಪ್ರದರ್ಶನದ ಬಗ್ಗೆ ಖುಷ್ ಅತೃಪ್ತಿ ಹೊಂದಿದ್ದರು. ಇದೇ ಕಾರಣಕ್ಕೆ ಆತ್ಮಹತ್ಯೆಗೆ ಶರಣಾದರಾ ಎನ್ನುವ ಅನುಮಾನ ಶುರುವಾಗಿದೆ. ಖುಷ್ ಸೀರತ್ ಮನೆಯಲ್ಲಿ ಯಾವುದೇ ಡೆತ್ ನೋಟು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
PublicNext
10/12/2021 01:49 pm