ಲಂಡನ್: ಲಾರ್ಡ್ಸ್ ನಲ್ಲಿ ನಡೆಯುತ್ತಿರುವ ಆತಿಥೇಯ ಇಂಗ್ಲೆಂಡ್ ತಂಡದ ವಿರುದ್ಧದ ಟೆಸ್ಟ್ ಕ್ರಿಕೆಟ್ ಸರಣಿಯ ಎರಡನೇ ಪಂದ್ಯದ ನಾಲ್ಕನೇ ದಿನದಾಟ ಆರಂಭಕ್ಕೂ ಮುನ್ನ ಭಾರತ ತಂಡದ ಆಟಗಾರರು ತ್ರಿವರ್ಣ ಧ್ವಜ ಹಾರಿಸಿ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮಿಸಿದರು.
ಇಂದು ಭಾರತ ಸ್ವಾತಂತ್ರ್ಯದ 75ನೇ ವರ್ಷಾಚರಣೆಯ ದಿನವಾಗಿದೆ. ವಿರಾಟ್ ಕೊಹ್ಲಿ ಪಡೆಯ ವಿಡಿಯೊವೊಂದನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಬಿಸಿಸಿಐ, ಈ ಮಾಹಿತಿ ನೀಡಿದೆ. ʼಭಾರತದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ, ಧ್ವಜಾರೋಹಣ ಮಾಡಲು ಟೀಂ ಇಂಡಿಯಾ ಸದಸ್ಯರು ಒಂದೆಡೆ ಸೇರಿದರುʼ ಎಂದು ಟ್ವೀಟ್ ಮಾಡಿದೆ.
PublicNext
15/08/2021 07:38 pm