ಶಾರ್ಜಾ: ಭಾರೀ ಕುತೂಹಲ ಕೆರಳಿಸಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ 18 ರನ್‌ಗಳಿಂದ ರೋಚಕ ಗೆಲುವು ದಾಖಲಿಸಿದೆ.
ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ನ 16ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ನೀಡಿದ್ದ 229 ರನ್‌ಗಳ ಗುರಿ ಬೆನ್ನಟ್ಟಿದ ಕೆಕೆಆರ್ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 210 ರನ್ ಪೇರಿಸಲು ಶಕ್ತವಾಯಿತು. ಡೆಲ್ಲಿ ಪರ ನಿತೀಶ್ ರಾಣಾ 58 ರನ್ (35 ಎಸೆತ, 4 ಬೌಂಡರಿ, 4 ಸಿಕ್ಸರ್), ಈಯಾನ್ ಮಾರ್ಗನ್ 44 ರನ್ (18 ಎಸೆತ, 1 ಬೌಂಡರಿ, 5 ಸಿಕ್ಸರ್) ಹಾಗೂ ರಾಹುಲ್ ತ್ರಿಪಾಠಿ 36 ರನ್ (16 ಎಸೆತ, 3 ಬೌಂಡರಿ, 3 ಸಿಕ್ಸರ್) ದಾಖಲಿಸಿದರು.
ಡೆಲ್ಲಿ ಪರ ಅನ್ರಿಕ್ ನಾರ್ಟ್ಜೆ 4 ಓವರ್ ಬೌಲಿಂಗ್ ಮಾಡಿ 33 ರನ್ ನೀಡಿ 3 ವಿಕೆಟ್ ಪಡೆದರು. ಹರ್ಷಲ್ ಪಟೇಲ್ 2 ವಿಕೆಟ್ ಕಿತ್ತರೆ, ಕಗಿಸೊ ರಬಡಾ, ಮಾರ್ಕಸ್ ಸ್ಟೊಯಿನಿಸ್, ಅಮಿತ್ ಮಿಶ್ರಾ ತಲಾ ಒಂದು ವಿಕೆಟ್ ಪಡೆದರು.
ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ್ದ ಡೆಲ್ಲಿ ತಂಡವು ಶ್ರೇಯಸ್ ಅಯ್ಯರ್ ಔಟಾಗದೆ 88 ರನ್ ( 38 ಎಸೆತ, 7 ಬೌಂಡರಿ, 6 ಸಿಕ್ಸರ್), ಪೃಥ್ವಿ ಶಾ 66 ರನ್ (41 ಎಸೆತ, 4 ಬೌಂಡರಿ, 4 ಸಿಕ್ಸರ್) ಹಾಗೂ ರಿಷಬ್ ಪಂತ್ 38 ರನ್ (15 ಎಸೆತ, 5 ಬೌಂಡರಿ, 1 ಸಿಕ್ಸ್) ಸಹಾಯದಿಂದ 4 ವಿಕೆಟ್ ನಷ್ಟಕ್ಕೆ 228 ರನ್ ದಾಖಲಿಸಿತ್ತು.
PublicNext
03/10/2020 11:50 pm