ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆರ್‌ಸಿಬಿ ಇನ್ನಿಂಗ್ಸ್‌ನಲ್ಲಿ ಜಸ್ಟ್ 2 ಸಿಕ್ಸರ್- ಕೊಹ್ಲಿ ಪಡೆ ವಿರುದ್ಧ 59 ರನ್‌ಗಳಿಂದ ಗೆದ್ದ ಡೆಲ್ಲಿ

ದುಬೈ: ನಾಯಕ ವಿರಾಟ್‌ ಕೊಹ್ಲಿ ಹೊರತುಪಡಿಸಿ ಉಳಿದೆಲ್ಲ ಆಟಗಾರರು ಬ್ಯಾಟಿಂಗ್ ವೈಫಲ್ಯ ತೋರಿದ ಪರಿಣಾಮ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ರನ್‌ಗಳಿಂದ ಹೀನಾಯ ಸೋಲು ಕಂಡಿದೆ.

ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್​ನ 19ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿ ಡೆಲ್ಲಿ ನೀಡಿದ್ದ 197 ರನ್‌ಗಳ ಗುರಿ ಬೆನ್ನಟ್ಟಿದ ಆರ್‌ಸಿಬಿ 9 ವಿಕೆಟ್ ನಷ್ಟಕ್ಕೆ 137 ರನ್‌ ಗಳಿಸಲು ಮಾತ್ರ ಶಕ್ತವಾಯಿತು. ಆರ್‌ಸಿಬಿ ಪರ ವಿರಾಟ್ ಕೊಹ್ಲಿ 43 ರನ್ (39 ಎಸೆತ, 2 ಬೌಂಡರಿ, 1 ಸಿಕ್ಸ್‌) ಚಚ್ಚಿದರು. ಉಳಿದ ಯಾವುದೇ ಆಟಗಾರರು 20 ರನ್‌ಗಳ ಗಡಿ ದಾಟಲಿಲ್ಲ.

ಡೆಲ್ಲಿ ಪರ ಕಗಿಸೊ ರಬಡಾ ನಾಲ್ಕು ಓವರ್‌ ಬೌಲಿಂಗ್ ಮಾಡಿ ಕೇವಲ 24 ರನ್ ನೀಡಿ 4 ವಿಕೆಟ್‌ ಕಬಳಿಸಿದರು. ಅನ್ರಿಕ್ ನಾರ್ಟ್ಜೆ ಹಾಗೂ ಆಕ್ಸರ್ ಪಟೇಲ್ ತಲಾ ಎರಡು ವಿಕೆಟ್ ಹಾಗೂ ಆರ್‌.ಅಶ್ವಿನ್ ಒಂದು ವಿಕೆಟ್‌ ಪಡೆದು ಮಿಂಚಿದರು.

ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ ಡೆಲ್ಲಿ ತಂಡವು ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 196 ಗಳಿಸಿತ್ತು. ಡೆಲ್ಲಿ ಪರ ಮಾರ್ಕಸ್ ಸ್ಟಾಯಿನಿಸ್ ಔಟಾಗದೆ 53 ರನ್ (26 ಎಸೆತ, 6 ಬೌಂಡರಿ, 2 ಸಿಕ್ಸರ್), ಪೃಥ್ವಿ ಶಾ 42 ರನ್ (23 ಎಸೆತ, 5 ಬೌಂಡರಿ, 2 ಸಿಕ್ಸರ್) ಹಾಗೂ ರಿಷಬ್ ಪಂತ್ 37 ರನ್ (25 ಎಸೆತ, 3 ಬೌಂಡರಿ, 2 ಸಿಕ್ಸರ್) ಗಳಿಸಿದ್ದರು.

Edited By : Vijay Kumar
PublicNext

PublicNext

05/10/2020 11:23 pm

Cinque Terre

60.72 K

Cinque Terre

5