ಅಬುಧಾಬಿ: ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್.ಧೋನಿ ಹೆಲಿಕಾಪ್ಟರ್ ಶಾಟ್ ಅನೇಕ ಕ್ರಿಕೆಟ್ ಅಭಿಮಾನಿಗಳ ಮನ ಗೆದ್ದಿದೆ. ಈಗ ಈ ರೀತಿಯ ಶಾಟ್ ಹೊಡೆಯಲು ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸ್ಟೀವ್ ಸ್ಮಿತ್ ನೆಟ್‌ನಲ್ಲಿ ಭರ್ಜರಿ ಅಭ್ಯಾಸ ನಡೆಸಿದ್ದಾರೆ.
ರಾಜಸ್ಥಾನ್ ರಾಯಲ್ಸ್ ತಂಡ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಅಭ್ಯಾಸದ ವೇಳೆ ಸ್ಮಿತ್ ಹೆಲಿಕಾಪ್ಟರ್ ಶಾಟ್ ಹೊಡೆಯಲು ಪ್ರಯತ್ನ ಮಾಡಿರುವ ವಿಡಿಯೋವನ್ನು ಹಂಚಿಕೊಂಡಿದೆ. ಜೊತೆಗೆ ಹೆಲಿಕಾಪ್ಟರ್ ಶಾಟ್ ಹೊಡೆಯುವ ನಾಯಕನನ್ನು ನಾವು ಪ್ರೀತಿಸುತ್ತೇವೆ ಎಂದು ಬರೆದುಕೊಂಡಿದ್ದಾರೆ. ಈ ವಿಡಿಯೋದಲ್ಲಿ ವೇಗದ ಬೌಲರ್ ಎಸೆದ ಯಾರ್ಕರ್ ಗೆ ಸ್ಮಿತ್ ಹೆಲಿಕಾಪ್ಟರ್ ಶಾಟ್ ಬಾರಿಸಿರುವುದನ್ನು ಕಾಣಬಹುದು.
PublicNext
24/09/2020 07:24 pm