ಬೆಂಗಳೂರು: ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪಕದ ಗೆದ್ದು ಬಂದ ಭಾರತೀಯ ಕ್ರೀಡಾಪಟು ನೀರಜ್ ಚೋಪ್ರಾ ಅವರಿಗೆ ಕೋಚ್ ಆಗಿದ್ದ ಶಿರಸಿಯ ಕಾಶಿನಾಥ್ ನಾಯ್ಕ್ ಅವರಿಗೆ ರಾಜ್ಯ ಸರ್ಕಾರವು 10 ಲಕ್ಷ ಬಹುಮಾನ ಘೋಷಣೆ ಮಾಡಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಕ್ರೀಡಾ ಸಚಿವ ನಾರಾಯಣಗೌಡ, ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಜಾವೆಲಿನ್ ಎಸೆತದಲ್ಲಿ ಚಿನ್ನಕ್ಕೆ ಕೊರಳೊಡ್ಡಿದ ನೀರಜ್ ಚೋಪ್ರಾ ಅವರ ಸಾಧನೆ ಹಿಂದಿನ ಶಕ್ತಿಯಾಗಿರುವ ತರಬೇತುದಾರರಾದ ಶಿರಸಿಯ ಕಾಶಿನಾಥ್ ನಾಯ್ಕ್ ಅವರಿಗೆ ಇಲಾಖೆಯಿಂದ ರೂ. 10 ಲಕ್ಷ ನಗದು ಬಹುಮಾನ ಘೋಷಿಸಿದ್ದೇನೆ ಎಂದು ತಿಳಿಸಿದ್ದಾರೆ.
ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಅಮೋಘ ಸಾಧನೆಗೈದ ಭಾರತದ 7 ಕ್ರೀಡಾಪಟುಗಳನ್ನು ರಾಜ್ಯ ಸರ್ಕಾರದ ವತಿಯಿಂದ ಸನ್ಮಾನಿಸಲಾಗುವುದು. ಮುಖ್ಯಮಂತ್ರಿಗಳ ಜೊತೆಗೂ ಚರ್ಚಿಸಿದ್ದೇನೆ. ಈ ವೇಳೆ ತರಬೇತುದಾರರಾದ ಕಾಶಿನಾಥ್ ಅವರನ್ನೂ ಸನ್ಮಾನಿಸಲಾಗುವುದು ಎಂದು ಹೇಳಿದ್ದಾರೆ.
PublicNext
08/08/2021 08:39 pm