ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಒಲಿಂಪಿಕ್‌ನಲ್ಲಿ ಚಿನ್ನ ಗೆದ್ದ ನೀರಜ್‌ಗೆ ಪದ್ಮಶ್ರೀ ಪ್ರದಾನ

ದೆಹಲಿ: ಟೋಕಿಯೊ ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಅವರಿಗೆ ಸೋಮವಾರ ರಾಷ್ಟ್ರಪತಿ ಭವನದಲ್ಲಿ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪದ್ಮಶ್ರೀ ಪ್ರಶಸ್ತಿಗೆ ಹೆಸರಿಸಲಾದ ಎಂಟು ಕ್ರೀಡಾಪಟುಗಳಲ್ಲಿ ಜಾವೆಲಿನ್ ಎಸೆತಗಾರ ನೀರಜ್ ಕೂಡ ಸೇರಿದ್ದಾರೆ.

ಗೃಹ ಸಚಿವಾಲಯವು ಜನವರಿ 25 ರಂದು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಗಳನ್ನು ಸ್ವೀಕರಿಸುವವರ ಪಟ್ಟಿಯನ್ನು ಪ್ರಕಟಿಸಿತು. ಈ ವರ್ಷ ಒಟ್ಟು 128 ಜನರಿಗೆ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಎಂಬ ಮೂರು ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ.

Edited By : Nagaraj Tulugeri
PublicNext

PublicNext

28/03/2022 08:33 pm

Cinque Terre

58.59 K

Cinque Terre

0