ಢಾಕಾ: ಬಾಂಗ್ಲಾದೇಶದ ಮಹಿಳಾ ಕ್ರಿಕೆಟ್ ತಂಡದ ಇಬ್ಬರು ಸದಸ್ಯರಿಗೆ ಹೊಸ ರೂಪಾಂತರಿ ತಗುಲಿರುವುದು ದೃಢಪಟ್ಟಿದೆ. ಈ ಮೂಲಕ ಬಾಂಗ್ಲಾದಲ್ಲಿ ಮೊದಲ ಒಮಿಕ್ರಾನ್ ಪ್ರಕರಣ ಪತ್ತೆಯಾಗಿದೆ.
ಇವರಿಬ್ಬರು ಡಿಸೆಂಬರ್ 6ರಂದು ಜಿಂಬಾಬ್ವೆಯಿಂದ ಹಿಂದಿರುಗಿದ್ದರು. ಇಬ್ಬರೂ ಜ್ವರದಿಂದ ಬಳಲುತ್ತಿದ್ದಾರೆ. ನಾವು ಅವರನ್ನು ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಇರಿಸಿ ಚಿಕಿತ್ಸೆ ನೀಡುತ್ತಿದ್ದೇವೆ. ಸಂಪೂರ್ಣ ಚೇತರಿಸಿಕೊಂಡ ನಂತರ ಬಿಡುಗಡೆ ಮಾಡುತ್ತೇವೆ ಎಂದು ಬಾಂಗ್ಲಾದೇಶದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜಾಹಿದ್ ಮಾಲೆಕ್ ತಿಳಿಸಿದ್ದಾರೆ.
ಸೋಂಕು ದೃಢಪಟ್ಟ ಕ್ರಿಕೆಟರ್‌ಗಳ ಪ್ರಾಥಮಿಕ ಸಂಪರ್ಕಕ್ಕೆ ಬಂದ ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವರೆಲ್ಲರ ವರದಿ ನೆಗೆಟಿವ್ ಬಂದಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
PublicNext
11/12/2021 10:08 pm