ಕೋಲ್ಕತ್ತಾ : ಲಘು ಹೃದಯಾಘಾತದಿಂದ ಆಸ್ಪತ್ರೆ ಸೇರಿರುವ ಭಾರತ ತಂಡದ ಮಾಜಿ ನಾಯಕ ಮತ್ತು ಹಾಗೂ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಜನವರಿ 6 ರಂದು ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಖ್ಯಾತ ಹೃದಯ ಸರ್ಜನ್ ಡಾ. ದೇವಿ ಶೆಟ್ಟಿ ಅವರು ಆಸ್ಪತ್ರೆಯಲ್ಲಿರುವ ಗಂಗೂಲಿಯನ್ನು ಮಂಗಳವಾರ ಭೇಟಿ ಮಾಡಲಿದ್ದಾರೆ. ಅದ್ದರಿಂದ ಮಂಗಳವಾರದ ಬದಲು ಅವರನ್ನು ಬುಧವಾರ ಡಿಸ್ಚಾರ್ಜ್ ಮಾಡಲಾಗುವುದು ಎಂದು ಬಿಸಿಸಿಐ ಅಧ್ಯಕ್ಷರಿಗೆ ಚಿಕಿತ್ಸೆ ನೀಡುತ್ತಿರುವ ತಂಡದ ಸದಸ್ಯರೊಬ್ಬರು ಇಂದು ಮಧ್ಯಾಹ್ನ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಎದೆ ನೋವಿನ ಕಾರಣದಿಂದ ಗಂಗೂಲಿ ಅವರನ್ನು ಕೋಲ್ಕತ್ತಾದ ವುಡ್ಲ್ಯಾಂಡ್ಸ್ ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಅವರಿಗೆ ಶನಿವಾರ ಆಂಜಿಯೋಪ್ಲ್ಯಾಸ್ಟಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು.
PublicNext
04/01/2021 10:45 pm