ಕೋಲ್ಕತ್ತಾ: ಇಂದು ಮತ್ತೆ ಎದೆನೋವು ಕಾಣಿಸಿಕೊಂಡ ಪರಿಣಾಮ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ಇತ್ತೀಚೆಗೆ ಲಘು ಹೃದಯಾಘಾತಕ್ಕೆ ಅವರು ಆಸ್ಪತ್ರೆಗೆ ದಾಖಲಾಗಿ ಡಿಸ್ಚಾರ್ಜ್ ಆಗಿದ್ದರು.
ಗಂಗೂಲಿಯವರು ಇಂದು ಬೆಳಗ್ಗೆ ಎದೆನೋವಿನಿಂದ ಬಳಲುತ್ತಿದ್ದು, ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ಸೌರವ್ ಗಂಗೂಲಿಗೆ ಮತ್ತೆ ಎದೆನೋವು ಕಾಣಿಸಿಕೊಂಡಿದೆ ಎನ್ನುವ ವಿಚಾರ ತಿಳಿಯುತ್ತಿದ್ದಂತೆ ಅವರ ಅಭಿಮಾನಿಗಳು ಟ್ವಿಟ್ಟರ್ನಲ್ಲಿ ಬೇಗ ಗುಣಮುಖರಾಗುವಂತೆ ಪ್ರಾರ್ಥನೆ ಮಾಡಿದ್ದಾರೆ. ಸದ್ಯ, ಗಂಗೂಲಿ ಅವರ ಆರೋಗ್ಯ ಪರಿಸ್ಥಿತಿ ಹೇಗಿದೆ ಎನ್ನುವ ವಿಚಾರದ ಬಗ್ಗೆ ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಿದೆ.
PublicNext
27/01/2021 03:00 pm