ಇಸ್ಲಾಮಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವೆ ಇತ್ತೀಚೆಗೆ ನಡೆದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಕೆ.ಎಲ್.ರಾಹುಲ್ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು. ಬಳಿಕ ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತದ ಬೌಲರ್‌ಗಳು ಇಂಗ್ಲೆಂಡ್ ತಂಡಕ್ಕೆ ಆಘಾತ ನೀಡಿ, ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು.
ಲಾರ್ಡ್ಸ್ ಅಂಗಳದಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಗೆದ್ದು ಬೀಗಲು ಕಾರಣರಾದ ಆಟಗಾರರಲ್ಲಿ ಮೊಹಮ್ಮದ್ ಸಿರಾಜ್ ಕೂಡ ಒಬ್ಬರು. ಎರಡನೇ ಟೆಸ್ಟ್ ಪಂದ್ಯದ ಮೊದಲನೇ ಇನ್ನಿಂಗ್ಸ್‌ನಲ್ಲಿ 4 ವಿಕೆಟ್ ಪಡೆದ ಮೊಹಮ್ಮದ್ ಸಿರಾಜ್, ಎರಡನೇ ಇನ್ನಿಂಗ್ಸ್‌ನಲ್ಲಿಯೂ 4 ವಿಕೆಟ್‌ಗಳನ್ನು ಪಡೆದು ಮಿಂಚಿದರು. ಹೀಗೆ ಲಾರ್ಡ್ಸ್ ಅಂಗಳದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಒಟ್ಟು 8 ವಿಕೆಟ್‌ಗಳನ್ನು ಪಡೆದ ಮೊಹಮ್ಮದ್ ಸಿರಾಜ್ ಕುರಿತು ಇದೀಗ ಪಾಕಿಸ್ತಾನ ಮೂಲದ ಪತ್ರಕರ್ತೆ ಝೈನಬ್ ಅಬ್ಬಾಸ್ ಮೆಚ್ಚುಗೆಯ ಮಾತುಗಳನ್ನಾಡಿದ್ದು, ಸಿರಾಜ್ ಪ್ರದರ್ಶನದ ಕುರಿತು ಹಾಡಿ ಹೊಗಳಿದ್ದಾರೆ.
'ಮೊಹಮ್ಮದ್ ಸಿರಾಜ್ ಪ್ರಸ್ತುತ ಕ್ರಿಕೆಟ್ ಜಗತ್ತಿನ ಅತ್ಯುತ್ತಮ ಬೌಲರ್‌ಗಳಲ್ಲಿ ಒಬ್ಬರು. ಅವರು ಕಳೆದ ಬಾರಿಯ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಮತ್ತು ಪ್ರಸ್ತುತ ಇಂಗ್ಲೆಂಡ್ ವಿರುದ್ಧದ ಲಾರ್ಡ್ಸ್ ಟೆಸ್ಟ್‌ನಲ್ಲಿ ಅತ್ಯದ್ಭುತ ಪ್ರದರ್ಶನವನ್ನು ನೀಡುತ್ತಿದ್ದು ಸಿರಾಜ್ ಯಾವ ಪಿಚ್‌ನಲ್ಲಿ ಹೇಗೆ ಬೌಲಿಂಗ್ ಮಾಡಬೇಕು ಎಂಬ ಉಪಾಯವನ್ನು ಬಲ್ಲ ಆಟಗಾರನಾಗಿದ್ದಾರೆ. ಬೌಲಿಂಗ್‌ನ ಲೈನ್ ಮತ್ತು ಲೆಂತ್ ಅನ್ನು ಬಹಳ ಅಚ್ಚುಕಟ್ಟಾಗಿ ನಿಭಾಯಿಸುವ ಸಿರಾಜ್ ಪ್ರದರ್ಶನ ನಿಜಕ್ಕೂ ಮನ ಗೆದ್ದಿದೆ' ಎಂದು ಝೈನಬ್ ಅಬ್ಬಾಸ್ ತಿಳಿಸಿದ್ದಾರೆ.
PublicNext
19/08/2021 05:48 pm