ಅಬುಧಾಬಿ: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಕೋಲ್ಕತ್ತಾ ನೈಟ್ ರೈಡರ್ಸ್ ಹೊಸ ಮೈಲಿಗಲ್ಲು ಬರೆದಿದೆ.
ಟಾಸ್ ಗೆದ್ದ ನಂತರ ಕೋಲ್ಕತಾ ನೈಟ್ ರೈಡರ್ಸ್ ಮೊದಲು ಬ್ಯಾಟಿಂಗ್ ಮಾಡಲು ಆಯ್ಕೆ ಮಾಡಿಕೊಂಡಿರುವುದು ಐದು ವರ್ಷಗಳ ನಂತರ ಇದೇ ಮೊದಲು. ಅಷ್ಟೇ ಅಲ್ಲದೆ 69 ಪಂದ್ಯಗಳ ನಂತರ ಇದೇ ಮೊದಲ ಬಾರಿಗೆ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಕೋಲ್ಕತ್ತಾ ನೈಟ್ ರೈಡರ್ಸ್ 182 ಐಪಿಎಲ್ ಪಂದ್ಯಗಳಲ್ಲಿ 94 ಪಂದ್ಯಗಳನ್ನು ಗೆದ್ದಿದೆ. ಸಿಎಸ್‌ಕೆ ಹಾಗೂ ಕೆಕೆಆರ್ ಉಭಯ ತಂಡಗಳು ಐಪಿಎಲ್ನಲ್ಲಿ 20 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಚೆನ್ನೈ 13 ಬಾರಿ ವಿಜಯ ಸಾಧಿಸಿದರೆ, ಕೋಲ್ಕತ್ತಾ ನೈಟ್ ರೈಡರ್ಸ್ 7 ಬಾರಿ ಮಾತ್ರ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದೆ.
PublicNext
07/10/2020 07:55 pm