ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಾಕ್ ಜಯ ಸಂಭ್ರಮಿಸಿದ 6 ಜನ ಅರೆಸ್ಟ್

ಲಖನೌ, ಜೈಪುರ: ಟಿ20 ವಿಶ್ವಕಪ್ ನಲ್ಲಿ ಪಾಕಿಸ್ತಾನ ಮೊದಲ ಬಾರಿ ಭಾರತದ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದೆ. ಇನ್ನು ಈ ಜಯವನ್ನು ಸಂಭ್ರಮಿಸಿದ ಐವರನ್ನು ಉತ್ತರ ಪ್ರದೇಶದಲ್ಲಿ ಅರೆಸ್ಟ್ ಮಾಡಲಾಗಿದೆ.ಉತ್ತರ ಪ್ರದೇಶದ ಆಗ್ರಾದಲ್ಲಿ ವ್ಯಾಸಂಗ ಮಾಡುತ್ತಿರುವ ಕಾಶ್ಮೀರದ ಮೂವರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು ಐವರನ್ನು ಬಂಧಿಸಲಾಗಿದೆ.

ಇದೇ ವೇಳೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಷೇಪಾರ್ಹ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ರಾಜಸ್ಥಾನದ ಉದಯಪುರದ ಖಾಸಗಿ ಶಾಲೆಯ ಶಿಕ್ಷಕರೊಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಕ್ಟೋಬರ್ 24 ರಂದು ನಡೆದ ಪಂದ್ಯದ ನಂತರ ದೇಶ ವಿರೋಧಿ ಸಂದೇಶವನ್ನು ಪೋಸ್ಟ್ ಮಾಡಿದ್ದಕ್ಕಾಗಿ ಆಗ್ರಾ, ಬರೇಲಿ, ಬದೌನ್ ಮತ್ತು ಸೀತಾಪುರ ಜಿಲ್ಲೆಗಳಲ್ಲಿ ಒಟ್ಟು ಏಳು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಏಳು ಜನರ ಪೈಕಿ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಮ್ಮ ಟ್ವಿಟರ್ ಖಾತೆಯಲ್ಲಿ ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಐಪಿಸಿಯ ಸೆಕ್ಷನ್ 105 (ಎ), 505 ಹಾಗೂ ಯುಎಪಿಎ ಸೆಕ್ಷನ್ 13ರ ಅಡಿ ಕೇಸ್ ದಾಖಲಾಗಿದೆ.

Edited By : Nirmala Aralikatti
PublicNext

PublicNext

28/10/2021 09:42 am

Cinque Terre

39.89 K

Cinque Terre

20

ಸಂಬಂಧಿತ ಸುದ್ದಿ