ಪಾಟ್ನಾ: ಚೆಕ್ ಬೌನ್ಸ್ ಪ್ರಕರಣದಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮತ್ತು ಇತರ ಏಳು ಮಂದಿಯ ವಿರುದ್ಧ ಬಿಹಾರದ ಬೇಗುಸರಾಯ್‌ನಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ವರದಿಗಳ ಪ್ರಕಾರ, ಎಸ್‌ಕೆ ಎಂಟರ್‌ಪ್ರೈಸಸ್ ಹೆಸರಿನ ಕಂಪನಿಯು ಸೋಮವಾರ ಬೇಗುಸರಾಯ್‌ನ ಸಿಜೆಎಂ ನ್ಯಾಯಾಲಯದಲ್ಲಿ ಎಫ್‌ಐಆರ್ ದಾಖಲಿಸಿದೆ. ಅವರು 'ನ್ಯೂ ಗ್ಲೋಬಲ್ ಪ್ರೊಡ್ಯೂಸ್ ಇಂಡಿಯಾ ಲಿಮಿಟೆಡ್' ನಿಂದ ಪಡೆದ 30 ಲಕ್ಷ ರೂಪಾಯಿ ಮೌಲ್ಯದ ಚೆಕ್ ಬೌನ್ಸ್ ಆಗಿದೆ ಎಂದು ಆರೋಪಿಸಿದ್ದಾರೆ. ಧೋನಿ ನ್ಯೂ ಗ್ಲೋಬಲ್ ಪ್ರೊಡ್ಯೂಸ್ ಇಂಡಿಯಾ ಲಿಮಿಟೆಡ್ ಅನ್ನು ಪ್ರಚಾರ ಮಾಡಿದ್ದರು ಮತ್ತು ಆದ್ದರಿಂದ ಅವರನ್ನೂ ಕೂಡ ಈ ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ.
ಈ ವಿಚಾರ ನ್ಯಾಯಾಲದ ಮೆಟ್ಟಿಲೇರಿದ್ದು, ಸೋಮವಾರ ವಿಚಾರಣೆ ನಡೆಸಿದ ಬಳಿಕ ನ್ಯಾಯಾಲಯವು ಪ್ರಕರಣವನ್ನ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅಜಯ್ ಕುಮಾರ್ ಮಿಶ್ರಾ ಅವರಿಗೆ ವರ್ಗಾಯಿಸಿದೆ. ಪ್ರಕರಣದ ಮುಂದಿನ ವಿಚಾರಣೆ ಜೂನ್ 28ರಂದು ನಡೆಯಲಿದೆ.
PublicNext
01/06/2022 10:58 pm