ಅಬುಧಾಬಿ: ರಾಜಸ್ಥಾನ್ ರಾಯಲ್ಸ್ ವಿರುದ್ಧ ಭರ್ಜರಿ ಗೆಲುವು ದಾಖಲಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಏರಿದೆ. ಒಟ್ಟು ನಾಲ್ಕು ಪಂದ್ಯಗಳನ್ನು ಆಡಿರುವ ವಿರಾಟ್ ಕೊಹ್ಲಿ ಪಡೆ ಮೂರು ಪಂದ್ಯಗಳಲ್ಲಿ ಗೆಲವು ದಾಖಲಿಸಿ, ಒಂದಲ್ಲಿ ಮಾತ್ರ ಸೋಲು ಕಂಡಿದೆ. ಈ ಮೂಲಕ 6 ಅಂಕ ಗಳಿಸಿ ಅಗ್ರಸ್ಥಾನ ಅಲಂಕರಿಸಿದೆ. ಉಳಿದಂತೆ ಮುಂಬೈ ಇಂಡಿಯನ್ಸ್ ಎರಡನೇ ಸ್ಥಾನ, ಡೆಲ್ಲಿ ಕ್ಯಾಪಿಟಲ್ಸ್ ಮೂರನೇ ಸ್ಥಾನದಲ್ಲಿದ್ದರೆ, ಕೋಲ್ಕತ್ತಾ ನೈಟ್ ರೈಡರ್ಸ್ ನಾಲ್ಕನೇ ಸ್ಥಾನದಲ್ಲಿದೆ.
PublicNext
03/10/2020 07:49 pm