ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ಜಿಸಿಎಲ್‌ ವಾರ್ಡ್‌ ಹಬ್ಬಕ್ಕೆ ಅದ್ದೂರಿ ಚಾಲನೆ

ಗದಗ: ಗದಗ ಸ್ಪೋರ್ಟ್ಸ್ ಆಂಡ್‌ ಕಲ್ಚರಲ್‌ ಅಕಾಡೆಮಿ ಬೆಟಗೇರಿ ಭಾಗದಲ್ಲಿ ಹಬ್ಬದ ವಾತಾವರಣ ಸೃಷ್ಟಿ ಮಾಡಿದೆ. ಸ್ಥಳೀಯರು ಕಲೆ, ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ವಾರ್ಡ್‌ಗಳ ಹಬ್ಬವನ್ನು ಯಶಸ್ವಿಗೊಳಿಸಬೇಕೆಂದು ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ. ಪಾಟೀಲ ಹೇಳಿದರು.

ಬೆಟಗೇರಿ ರಂಗಪ್ಪಜ್ಜನ ಮಠದ ಆವರಣದಲ್ಲಿ ಗದಗ ನ್ಪೋರ್ಟ್ಸ್ ಆಂಡ್‌ ಕಲ್ಚರಲ್‌ ಅಕಾಡೆಮಿ ವತಿಯಿಂದ ಹಮ್ಮಿಕೊಂಡ 'ಗದಗ ಹಬ್ಬ'ದ ಭಾಗವಾಗಿರುವ ವಾರ್ಡ್‌ಗಳ ಹಬ್ಬವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಪ್ರಯುಕ್ತ ನಗರದಲ್ಲಿ ಭರ್ಜರಿಯಾಗಿ ಮೆರವಣಿಗೆ ನಡೆಯಿತು. ಮೆರವಣಿಗೆಯು ಬೆಟಗೇರಿಯ ವೀರಭದ್ರೇಶ್ವರ ದೇವಸ್ಥಾನದಿಂದ ಆರಂಭಗೊಂಡಿತ್ತು. ಮೆರವಣಿಗೆಯಲ್ಲಿ ಕುಂಭಮೇಳ, ಹೆಜ್ಜೆ ಮೇಳ, ದೊಡ್ಡ ಮುಖವಾಡದ ಗೊಂಬೆಗಳು, ಹೊಸಗರಡಿ, ದೊಡ್ಡಾಟ ಮೇಳ ಹಾಗೂ ಪೌರಾಣಿಕ ಪಾತ್ರಗಳ ವೇಷಧಾರಿಗಳು, ಡೊಳ್ಳು ಕುಣಿತ ಸಂಭ್ರಮ ಮನೆ ಮಾಡಿತ್ತು.

Edited By :
PublicNext

PublicNext

21/08/2022 04:01 pm

Cinque Terre

36.46 K

Cinque Terre

0