ಅಬುಧಾಬಿ: ಸೂರ್ಯಕುಮಾರ್ ಯಾದವ್ ಭರ್ಜರಿ ಬ್ಯಾಟಿಂಗ್, ನಾಯಕ ರೋಹಿತ್ ಶರ್ಮಾ ತಾಳ್ಮೆಯ ಆಟದಿಂದ ಮುಂಬೈ ಇಂಡಿಯನ್ಸ್ ತಂಡವು ರಾಜಸ್ಥಾನ್ ರಾಯನ್ಸ್‌ಗೆ 194 ರನ್‌ಗಳ ಬೃಹತ್ ಮೊತ್ತದ ಗುರಿ ನೀಡಿದೆ.
ಅಬುಧಾಬಿ ಶೇಖ್ ಝಯೀದ್ ಕ್ರೀಡಾಂಗಣದಲ್ಲಿ ನಡೆಯುತ್ತಿರವ 13ನೇ ಆವೃತ್ತಿಯ ಐಪಿಎಲ್ನ 20ನೇ ಪಂದ್ಯ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 4 ವಿಕೆಟ್ ನಷ್ಟಕ್ಕೆ 193 ರನ್‌ಗಳನ್ನು ಚಚ್ಚಿದೆ. ಮುಂಬೈ ಪರ ಸೂರ್ಯಕುಮಾರ್ ಶರ್ಮಾ ಅಜೇಯ 79 ರನ್ (47ಎಸೆತ, 11 ಬೌಂಡರಿ, 2 ಸಿಕ್ಸರ್), ನಾಯಕ ರೋಹಿತ್ ಶರ್ಮಾ 35 ರನ್ (23 ಎಸೆತ, 2 ಬೌಂಡರಿ, 3 ಸಿಕ್ಸರ್) ಹಾಗೂ ಹಾರ್ದಿಕ್ ಪಾಂಡ್ಯ ಅಜೇಯ 30 ರನ್ (19 ಎಸೆತ, 2 ಬೌಂಡರಿ, 1 ಸಿಕ್ಸ್) ಗಳಿಸಿದರು.
ಟಾಸ್ ಗೆದ್ದು ಬ್ಯಾಟಿಂಗ್ಗೆ ಇಳಿದಿರುವ ಮುಂಬೈ ಇಂಡಿಯನ್ಸ್ ಸ್ಫೋಟಕ ಆರಂಭ ಪಡೆದುಕೊಳ್ಳುವ ಜೊತೆ ಪ್ರಮುಖ ವಿಕೆಟ್ ಕಳೆದುಕೊಂಡಿತು. ಪದಾರ್ಪಣೆ ಪಂದ್ಯದಲ್ಲಿ ಕಾರ್ತಿಕ್ ತ್ಯಾಗಿ ಅವರು 23 ರನ್ ಗಳಿಸಿದ್ದ ಕ್ವಿಂಟನ್ ಡಿಕಾಕ್ ಅವರನ್ನು ಪೆವಿಲಿಯನ್ಗೆ ಅಟ್ಟುವಲ್ಲಿ ಯಶಸ್ವಿಯಾದರು. ಬಳಿಕ ನಾಯಕ ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಇನ್ನಿಂಗ್ಸ್ ಕಟ್ಟುವಲ್ಲಿ ವಿಫಲರಾದರು. 35 ರನ್ ಗಳಿಸಿದ್ದ ರೋಹಿತ್ ಅವರು ಶ್ರೇಯಸ್ ಗೋಪಾಲ್ ಬೌಲಿಂಗ್ನಲ್ಲಿ ಔಟ್ ಆದರು. ಇದರ ಮುಂದಿನ ಎಸೆದಲ್ಲೇ ಇಶಾನ್ ಕಿಶನ್ ಔಟ್ ಆಗಿ ಆಘಾತ ನೀಡಿದರು.
ಕೃನಾಲ್ ಪಾಂಡ್ಯ ಕೂಡ 12 ರನ್ಗೆ ವಿಕೆಟ್ ಒಪ್ಪಿಸಿದರು. ಏಕಾಂಗಿ ಹೋರಾಟ ನಡೆಸಿದ್ದ ಸೂರ್ಯಕುಮಾರ್ (79 ರನ್) ಅವರಿಗೆ ಕೊನೆಯಲ್ಲಿ ಹಾರ್ದಿಕ್ ಪಾಂಡ್ಯ (30 ರನ್) ಸಾಥ್ ನೀಡಿದರು. ರಾಜಸ್ಥಾನ ತಂಡದ ಪರ ಶ್ರೇಯಸ್ ಗೋಪಾಲ್ 2 ವಿಕೆಟ್ ಕಿತ್ತು ಮಿಂಚಿದರೆ, ಕಾರ್ತಿಕ್ ತ್ಯಾಗಿ ಹಾಗೂ ಜೋಫ್ರಾ ಆರ್ಚರ್ ತಲಾ ಒಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.
PublicNext
06/10/2020 09:37 pm