ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸ್ಯಾಮ್ಸನ್, ತಿವಾಟಿಯಾ ಸಿಕ್ಸರ್ ಸುರಿಮಳೆ- ಐಪಿಎಲ್ ಇತಿಹಾಸದಲ್ಲೇ ದಾಖಲೆ ಬರೆದ ಆರ್‌ಆರ್‌

ಶಾರ್ಜಾ: ಭಾರೀ ಕುತೂಹಲ ಕೆರಳಿಸಿದ್ದ ಸಂಜು ಸ್ಯಾಮ್ಸನ್, ನಾಯಕ ಸ್ಟೀವ್ ಸ್ಮಿತ್ ಹಾಗೂ ರಾಹುಲ್ ತಿವಾಟಿಯಾ ಭರ್ಜರಿ ಬ್ಯಾಟಿಂಗ್ ಸಹಾಯದಿಂದ ರಾಜಸ್ಥಾನ ರಾಯಲ್ಸ್ ತಂಡವು ಕಿಂಗ್ಸ್‌ ಇಲೆವೆನ್ ಪಂಜಾಬ್ ವಿರುದ್ಧ 4 ವಿಕೆಟ್‌ಗಳಿಂದ ಗೆಲುವು ಸಾಧಿಸಿದೆ.

ಶಾರ್ಜಾ ಮೈದಾನದಲ್ಲಿ ಇಂದು ನಡೆದ ಐಪಿಎಲ್​ನ 9ನೇ ಪಂದ್ಯದಲ್ಲಿ ಪಂಜಾಬ್ ತಂಡ ನೀಡಿದ್ದ 224 ರನ್‌ಗಳ ಬೃಹತ್ ಮೊತ್ತದ ಗುರಿಯನ್ನು ರಾಜಸ್ಥಾನ ತಂಡವು 3 ಎಸೆತಗಳು ಬಾಕಿ ಇರುವಾಗಲೇ 6 ವಿಕೆಟ್ ನಷ್ಟಕ್ಕೆ 226 ರನ್ ಗಳಿಸಿ ಗೆದ್ದು ಬೀಗಿದೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಅತಿ ಹೆಚ್ಚು ರನ್ ಚೇಸ್ ಮಾಡಿದ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ರಾಜಸ್ಥಾನ್ ರಾಯಲ್ಸ್‌ ಪರ ಸಂಜು ಸ್ಯಾಮ್ಸನ್ 85 ರನ್ (42 ಎಸೆತ, 4 ಬೌಂಡರಿ, 7 ಸಿಕ್ಸರ್), ರಾಹುಲ್ ತಿವಾಟಿಯಾ 53 ರನ್ (31 ಎಸೆತ, 7 ಸಿಕ್ಸರ್) ಹಾಗೂ ನಾಯಕ ಸ್ಟೀವ್ ಸ್ಮಿತ್ 50 ರನ್, (27 ಎಸೆತ, 7 ಬೌಂಡರಿ, 2 ಸಿಕ್ಸರ್) ಬಾರಿಸಿದರು. ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ್ದ ಪಂಜಾಬ್ ತಂಡವು ಮಯಾಂಕ್ ಅಗರ್ವಾಲ್ 106 ರನ್ (50 ಎಸೆತ, 10 ಬೌಂಡರಿ, 7 ಸಿಕ್ಸರ್) ಹಾಗೂ ನಾಯಕ ಕೆ.ಎಲ್.ರಾಹುಲ್ 69 ರನ್ ( 54 ಎಸೆತ, 7 ಬೌಂಡರಿ, 1 ಸಿಕ್ಸ್) ಸಹಾಯದಿಂದ 2 ವಿಕೆಟ್‌ ನಷ್ಟಕ್ಕೆ 223ರನ್ ಪೇರಿಸಿತ್ತು.

Edited By : Vijay Kumar
PublicNext

PublicNext

27/09/2020 11:19 pm

Cinque Terre

95.32 K

Cinque Terre

18

ಸಂಬಂಧಿತ ಸುದ್ದಿ