ಅಬುಧಾಬಿ: ಐಪಿಎಲ್-13ನೇ ಆವೃತ್ತಿ ಆರಂಭದಲ್ಲೇ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಆಘಾತ ಎದುರಾಗಿದ್ದು, ತಂಡದ ಸ್ಟಾರ್ ಆಲ್‍ರೌಂಡರ್ ಮಿಚೆಲ್ ಮಾರ್ಷ್ ಟೂರ್ನಿಯಿಂದ ಹೊರಬಂದಿದ್ದಾರೆ.
ತನ್ನ ಅಧಿಕೃತ ಟ್ವಿಟ್ಟರಿನಲ್ಲಿ ಟ್ವೀಟ್ ಮಾಡಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ, ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಮಿಚೆಲ್ ಮಾರ್ಷ್ ಅವರು ಟೂರ್ನಿಯಿಂದ ಹೊರಬಂದಿದ್ದಾರೆ. ಅವರು ಬೇಗ ಗಾಯದಿಂದ ಗುಣಮುಖರಾಗಲಿ ಎಂದು ನಾವು ಹಾರೈಸುತ್ತೇವೆ. ವೆಸ್ಟ್ ಇಂಡೀಸ್ ತಂಡದ ಆಲ್‍ರೌಂಡರ್ ಜೇಸನ್ ಹೋಲ್ಡರ್ ಅವರು ಮಾರ್ಷ್ ಜಾಗಕ್ಕೆ ಬಂದಿದ್ದಾರೆ ಎಂದು ತಿಳಿಸಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಕಳೆದ ಸೋಮವಾರ ನಡೆದ ಪಂದ್ಯದಲ್ಲಿ ಮಾರ್ಷ್ ಗಾಯಗೊಂಡಿದ್ದರು. ಬೌಲಿಂಗ್ ಮಾಡುವ ವೇಳೆ ಹೊಸ ಶೂ ಧರಿಸಿದ್ದರಿಂದ ಪಾದಕ್ಕೆ ಗಾಯವಾಗಿತ್ತು. ಈಗ ಇದೇ ಸಮಸ್ಯೆಯಿಂದ ಮಾರ್ಷ್ ಟೂರ್ನಿಯಿಂದ ಹೊರಬಂದಿದ್ದು, ಹೈದರಾಬಾದ್ ತಂಡಕ್ಕೆ ಆರಂಭಿಕ ಹಿನ್ನೆಡೆಯಾಗಿದೆ.
PublicNext
23/09/2020 07:54 pm