ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಾಟ್ಸನ್, ಡುಪ್ಲೆಸಿಸ್ ಅಬ್ಬರಕ್ಕೆ ಬೆಚ್ಚಿಬಿದ್ದ ರಾಹುಲ್ ಪಡೆ- ಪಂಜಾಬ್ ವಿರುದ್ಧ 10 ವಿಕೆಟ್‌ಗಳಿಂದ ಗೆದ್ದ ಸಿಎಸ್‌ಕೆ

ದುಬೈ: ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ಫಾಫ್ ಡುಪ್ಲೆಸಿಸ್ ಹಾಗೂ ಶೇನ್ ವಾಟ್ಸನ್ ಭರ್ಜರಿ ಬ್ಯಾಟಿಂಗ್‌ನಿಂದಾಗಿ ಕಿಂಗ್ಸ್​ ಇಲೆವೆನ್ ಪಂಜಾಬ್ ತಂಡದ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್​ 10 ವಿಕೆಟ್‌ಗಳಿಂದ ಗೆಲುವು ಸಾಧಿಸಿದೆ.

ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಐಪಿಎಲ್​ನ 18ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಕಿಂಗ್ಸ್​ ಇಲೆವೆನ್ ಪಂಜಾಬ್ ತಂಡ ಚೆನ್ನೈ ಸೂಪರ್ ಕಿಂಗ್ಸ್​ಗೆ 179 ರನ್​ಗಳ ಟಾರ್ಗೆಟ್ ನೀಡಿತ್ತು. ಚೆನ್ನೈ ತಂಡವು ಫಾಫ್ ಡುಪ್ಲೆಸಿಸ್ ಅಜೇಯ 87 ರನ್ ( 53 ಎಸೆತ, 11 ಬೌಂಡರಿ, 1 ಸಿಕ್ಸ್‌) ಹಾಗೂ ಶೇನ್ ವಾಟ್ಸನ್ ಅಜೇಯ 83 ರನ್ (53 ಎಸೆತ, 11 ಬೌಂಡರಿ, 3 ಸಿಕ್ಸರ್) ಸಹಾಯದಿಂದ ಯಾವುದೇ ವಿಕೆಟ್‌ ನಷ್ಟವಿಲ್ಲದೆ 181 ರನ್ ಚಚ್ಚಿ ಗೆದ್ದು ಬೀಗಿದರು.

ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ್ದ ಪಂಜಾಬ್ ತಂಡವು ಕೆ.ಎಲ್.ರಾಹುಲ್ 63 ರನ್ (52 ಎಸೆತ, 7 ಬೌಂಡರಿ, 1 ಸಿಕ್ಸ್‌), ನಿಕೋಲಸ್ ಪೂರನ್ 33 ರನ್ (17 ಎಸೆತ, 1 ಬೌಂಡರಿ, 3 ಸಿಕ್ಸರ್) ಸಹಾಯದಿಂದ 4 ವಿಕೆಟ್ ನಷ್ಟಕ್ಕೆ 178 ರನ್ ಪೇರಿಸಿತ್ತು.

Edited By : Vijay Kumar
PublicNext

PublicNext

04/10/2020 11:14 pm

Cinque Terre

62.57 K

Cinque Terre

4

ಸಂಬಂಧಿತ ಸುದ್ದಿ