ಮೆಲ್ಬರ್ನ್: ಆಸ್ಟ್ರೇಲಿಯಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್‌ಗಳು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ.
ಆಸ್ಟ್ರೇಲಿಯಾ ಕಾಲಮಾನದ ಪ್ರಕಾರ 10:30ಕ್ಕೆ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸೀಸ್ ಪಡೆಯನ್ನು ಟೀಂ ಇಂಡಿಯಾ ಆಟಗಾರರು ಕಟ್ಟಿಹಾಕಿದರು. ಊಟದ ವಿರಾಮದ ವೇಳೆಗೆ ಆಸೀಸ್ ಪಡೆಯು 27 ಓವರ್‌ಗಳಲ್ಲಿ ತನ್ನ ಪ್ರಮುಖ 3 ವಿಕೆಟ್ ಕಳೆದುಕೊಂಡು 65 ರನ್ ಗಳಿಸಿದೆ. ಟೀಂ ಇಂಡಿಯಾ ಪರ ಆರ್.ಅಶ್ವಿನ್ 2 ವಿಕೆಟ್ ಪಡೆದರೆ, ಜಸ್‌ಪ್ರೀತ್ ಬುಮ್ರಾ 1 ವಿಕೆಟ್ ಕಬಳಿಸಿದ್ದಾರೆ.
PublicNext
26/12/2020 07:24 am