ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಾಕ್ಸಿಂಗ್ ಡೇ ಟೆಸ್ಟ್‌: ಬುಮ್ರಾ, ಅಶ್ವಿನ್ ದಾಳಿಗೆ ಆಸೀಸ್ ಸರ್ವಪತನ- ಭಾರತಕ್ಕೆ ಮೊದಲ ದಿನದ ಗೌರವ

ಮೆಲ್ಬರ್ನ್: ಆಸ್ಟ್ರೇಲಿಯಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್‌ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾ ಮೊದಲ ದಿನದ ಗೌರವ ಪಡೆದಿದೆ. ಭಾರತದ ಜಸ್‌ಪ್ರೀತ್ ಬುಮ್ರಾ, ಆರ್‌.ಅಶ್ವಿನ್ ಹಾಗೂ ಮೊಹಮ್ಮದ್ ಸಿರಾಜ್ ಅವರ ದಾಳಿಗೆ ತತ್ತರಿಸಿದ ಆಸೀಸ್ ಪಡೆ ಕೇವಲ 195 ರನ್‌ಗಳಿಗೆ ಸರ್ವಪತನ ಕಂಡಿತು. ಬಳಿಕ ಬ್ಯಾಟಿಂಗ್ ಮಾಡಿದ ಭಾರತ ದಿನದಾಟದಂತ್ಯಕ್ಕೆ ಒಂದು ವಿಕೆಟ್‌ ನಷ್ಟಕ್ಕೆ 36 ರನ್‌ ಬಾರಿಸಿದ್ದು, ಇನ್ನೂ 159 ರನ್‌ಗಳ ಹಿನ್ನಡೆಯಲ್ಲಿದೆ.

ಟೆಸ್ಟ್‌ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಹೈದರಾಬಾದ್ ವೇಗಿ ಮೊಹಮ್ಮದ್ ಸಿರಾಜ್ ಆಸ್ಟ್ರೇಲಿಯಾದ ಅಪಾಯಕಾರಿ ಬ್ಯಾಟ್ಸ್‌ಮನ್‌ಗಳಾದ ಮಾರ್ನಸ್ ಲಬುಶೇನ್ ಹಾಗೂ ಕ್ಯಾಮರೋನ್ ಗ್ರೀನ್‌ ವಿಕೆಟ್‌ ಕಬಳಿಸಿ ಪಂದ್ಯವನ್ನು ಮತ್ತಷ್ಟು ಸ್ಮರಣೀಯವಾಗಿಸಿಕೊಂಡರು. ಇತ್ತ ಶುಭ್‌ಮನ್‌ ಗಿಲ್ ಸಹ ಪಾದಾರ್ಪಣೆ ಪಂದ್ಯದಲ್ಲಿ ಮಿಂಚಿದ್ದಾರೆ. ಅವರು 38 ಎಸೆತಗಳಲ್ಲಿ 5 ಬೌಂಡರಿ ಸಹಿತ 28 ರನ್ ಬಾರಿಸಿ ಎರಡನೇ ದಿನಕ್ಕೆ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ.

Edited By : Vijay Kumar
PublicNext

PublicNext

26/12/2020 02:22 pm

Cinque Terre

46.58 K

Cinque Terre

3

ಸಂಬಂಧಿತ ಸುದ್ದಿ