ಮೌಂಟ್ ಮೌಂಗನುಯಿ: ನ್ಯೂಜಿಲೆಂಡ್ ಹಾಗೂ ಪಾಕಿಸ್ತಾನ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನ ಅಭಿಮಾನಿಯೊಬ್ಬ ಬೆತ್ತಲೆಯಾಗಿ ಮೈದಾನಕ್ಕೆ ಪ್ರವೇಶಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮೌಂಟ್ ಮೌಂಗನುಯಿನ ಬೇ ಓವಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಕ್ರೀಸ್‌ಗೆ ಆಗಮಿಸಿ ಇನ್ನೇನು ಬ್ಯಾಟಿಂಗ್ ಮಾಡಬೇಕು ಎನ್ನುವಷ್ಟರಲ್ಲಿ ವ್ಯಕ್ತಿಯೊಬ್ಬ ಬೆತ್ತಲೆಯಾಗಿ ಅಂಗಳಕ್ಕೆ ಪ್ರವೇಶಿಸಿದ. ಈ ವೇಳೆ ಮರ್ಮಾಂಗವನ್ನು ಕೈಗಳಿಂದ ಮುಚ್ಚಿಕೊಂಡು ಪಿಚ್‌ನತ್ತ ಓಡಿ ಬಂದ. ಈ ವೇಳೆ ಕೆಲ ಕಾಲ ಆಟವನ್ನು ನಿಲ್ಲಿಸಿಲಾಗಿತ್ತು. ತಕ್ಷಣವೇ ಆತನನ್ನು ಹಿಡಿಯಲು ಭದ್ರತಾ ಸಿಬ್ಬಂದಿ ಅಂಗಳಕ್ಕೆ ಆಗಮಿಸಿ ವಶಕ್ಕೆ ಪಡೆದಿದ್ದಾರೆ.
ಸ್ಥಳದಲ್ಲಿದ್ದ ವೀಕ್ಷಕರೊಬ್ಬರು ದೃಶ್ಯವನ್ನು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ನೆಟ್ಟಿಗರು ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
PublicNext
28/12/2020 04:26 pm