ಮೆಲ್ಬರ್ನ್: ಆಸ್ಟ್ರೇಲಿಯಾ ವಿರುದ್ಧದ ಎರಡನೇ (ಬಾಕ್ಸಿಂಗ್ ಡೇ) ಟೆಸ್ಟ್‌ನಲ್ಲಿ ಅಜಿಂಕ್ಯ ರಹಾನೆ ನಾಯಕತ್ವದಲ್ಲಿ ಟೀಂ ಇಂಡಿಯಾ 8 ವಿಕೆಟ್‌ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ.
ಮೆಲ್ಬರ್ನ್ ಕ್ರಿಕೆಟ್ ಗ್ರೌಂಡ್‌ನಲ್ಲಿ ಇಂದು ಮುಕ್ತಾಯಗೊಂಡ ಎರಡನೇ ಟೆಸ್ಟ್‌ನಲ್ಲಿ ಟೀ ಇಂಡಿಯಾದ ಬ್ಯಾಟಿಂಗ್, ಫೀಲ್ಡಿಂಗ್‌ಗಾಗಿ ಗಮನ ಸೆಳೆದಿದ್ದಾರೆ. ಅಷ್ಟೇ ಅಲ್ಲದೆ ಈ ಪಂದ್ಯದ ಗೆಲುವಿನ ಮೂಲಕ ಅಜಿಂಕ್ಯ ರಹಾನೆ ಹೆಸರಿಗೆ ದಾಖಲೆಗಳು ಸೇರ್ಪಡೆಗೊಂಡಿವೆ. ಅವರು ಮೊದಲ ಇನ್ನಿಂಗ್ಸ್‌ನಲ್ಲಿ 112 ರನ್ ಹಾಗೂ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಅಜೇಯ 27 ರನ್ ಗಳಿಸಿ ಪಂದ್ಯದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿ ಪಂದ್ಯಶ್ರೇಷ್ಠಕ್ಕೆ ಭಾಜನರಾದರು.
ಅಜಿಂಕ್ಯ ರಹಾನೆ ನಾಯಕತ್ವ ವಹಿಸಿದ ಕೆಳಗಿನ ಈ ಮೂರೂ ಪಂದ್ಯಗಳಲ್ಲಿ ಭಾರತ ತಂಡ ಗೆಲುವು ದಾಖಲಿಸಿದೆ. 2017ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಧರ್ಮಶಾಲಾದಲ್ಲಿ ನಡೆದ ಪಂದ್ಯ, 2018ರಲ್ಲಿ ಬಾಂಗ್ಲಾದೇಶ ವಿರುದ್ಧ ಬೆಂಗಳೂರಿನಲ್ಲಿ ನಡೆದ ಹಾಗೂ 2020ರಲ್ಲಿ (ಡಿಸೆಂಬರ್ 29)ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೆಲ್ಬರ್ನ್ ನಲ್ಲಿ ನಡೆದ ಪಂದ್ಯದಲ್ಲಿ ಭಾರತ ಗೆದ್ದು ಬೀಗಿದೆ.
ಭಾರತ ಟೆಸ್ಟ್ ತಂಡಕ್ಕೆ ನಾಯಕರಾಗಿದ್ದು ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯ ಗೆದ್ದ ಸಾಧನೆಯ ಪಟ್ಟಿಯಲ್ಲಿ ರಹಾನೆ ಕೂಡ ಈಗ ಸೇರ್ಪಡೆಯಾಗಿದ್ದಾರೆ. ಈ ಸಾಧನೆಯು ಈಗ ಎಂ.ಎಸ್.ಧೋನಿ, ವಿರಾಟ್ ಕೊಹ್ಲಿ ಮತ್ತು ಅಜಿಂಕ್ಯ ರಹಾನೆ ಹೆಸರಿನಲ್ಲಿದೆ.
PublicNext
29/12/2020 02:15 pm