ಕೋಲ್ಕತ್ತಾ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಅವರನ್ನು ಎದೆನೋವಿನಿಂದಾಗಿ ಇಂದು ಕೋಲ್ಕತ್ತಾದ ಆಸ್ಪತ್ರೆಗೆ ದಾಖಲಿಸಲಾಗಿದೆ.
48ರ ಹರೆಯದ ಸೌರವ್ ಗಂಗೂಲಿ ಅವರು ಇಂದು ಬೆಳಿಗ್ಗೆ ತಮ್ಮ ನಿವಾಸದಲ್ಲಿ ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದಾಗ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ತಕ್ಷಣವೇ ಅವರನ್ನು ನಗರದ ವುಡ್‌ಲ್ಯಾಂಡ್ಸ್ ಆಸ್ಪತ್ರೆಗೆ ಸಾಗಿಸಲಾಯಿತು.
"ಸೌರವ್ ಗಂಗೂಲಿ ಅವರ ಆರೋಗ್ಯ ಈಗ ಸ್ಥಿರವಾಗಿದೆ. ನೋವು ಕೆಲವು ಹೃದಯ ಸಮಸ್ಯೆಯಿಂದ ಉಂಟಾಗಿದೆಯೇ ಅಥವಾ ಇಲ್ಲವೇ ಎಂದು ಪರಿಶೀಲಿಸುತ್ತಿದ್ದೇವೆ. ಅವರು ಹಲವಾರು ಪರೀಕ್ಷೆಗಳಿಗೆ ಒಳಗಾಗಬೇಕಾಗುತ್ತದೆ" ಎಂದು ವೈದ್ಯರೊಬ್ಬರು ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.
PublicNext
02/01/2021 02:33 pm