ಮೆಲ್ಬರ್ನ್: ಟೀಂ ಇಂಡಿಯಾ ವಿಕೆಟ್ ಕೀಪರ್, ಬ್ಯಾಟ್ಸ್‌ಮನ್ ಕೆ.ಎಲ್.ರಾಹುಲ್ ಆಸ್ಟ್ರೇಲಿಯಾ ವಿರುದ್ಧ ಉಳಿದಿರುವ ಎರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿದ್ದಾರೆ.
ಮೆಲ್ಬರ್ನ್ ಕ್ರಿಕೆಟ್ ಗ್ರೌಂಡ್‌ನಲ್ಲಿ ಶನಿವಾರ ಅಭ್ಯಾಸ ನಡೆಸಿದ್ದ 28 ವರ್ಷದ ಕೆ.ಎಲ್.ರಾಹುಲ್ ಬ್ಯಾಟಿಂಗ್ ವೇಳೆ ಮಣಿಕಟ್ಟು ಉಳುಕಿದೆ. ಹೀಗಾಗಿ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ಬಂದು ಚಿಕಿತ್ಸೆ ಪಡೆಯಲಿದ್ದಾರೆ.
ಸೀಮಿತ ಓವರ್‌ಗಳ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಕೆಎಲ್ ರಾಹುಲ್ ಟೆಸ್ಟ್ ಸ್ಕ್ವಾಡ್‌ನಲ್ಲಿದ್ದರೂ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆಯುವಲ್ಲಿ ವಿಫಲರಾಗಿದ್ದರು. ಮೊದಲ ಎರಡು ಪಂದ್ಯಗಳಲ್ಲಿ ಕೆಎಲ್ ರಾಹುಲ್ ಸ್ಥಾನವನ್ನು ಪಡೆಯುವ ನಿರೀಕ್ಷೆ ಹೊಂದಿತ್ತಾದರೂ ನಿರಾಸೆ ಅನುಭವಿಸಿದ್ದರು. ಈಗ ಉಳಿದೆರಡು ಪಂದ್ಯಗಳಿಂದಲೂ ರಾಹುಲ್ ಹೊರಬಿದ್ದಿದ್ದಾರೆ.
PublicNext
05/01/2021 11:23 am