ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಾಕ್ಸಿಂಗ್ ಡೇ ಟೆಸ್ಟ್‌ ಪಂದ್ಯ ವೀಕ್ಷಣೆಗೆ ಬಂದಿದ್ದ ಪ್ರೇಕ್ಷಕನಿಗೆ ಕೊರೊನಾ ಪಾಸಿಟಿವ್

ಮೆಲ್ಬರ್ನ್‌: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಎರಡನೇ ಅಥವಾ ಬಾಕ್ಸಿಂಗ್‌ ಡೇ ಟೆಸ್ಟ್ ಪಂದ್ಯದಲ್ಲಿ ಪಾಲ್ಗೊಂಡಿದ್ದ ಅಭಿಮಾನಿಗಳು ಆತಂಕಪಡುವ ಸುದ್ದಿಯೊಂದು ಹೊರಬಿದ್ದಿದೆ.

ಹೌದು. ಪಂದ್ಯವನ್ನು ವೀಕ್ಷಿಸಲು ಬಂದಿದ್ದ ಪ್ರೇಕ್ಷಕರ ಪೈಕಿ ಓರ್ವ ಅಭಿಮಾನಿಗೆ ಕೊರೊನಾ ವೈರಸ್ ದೃಢಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ಆದರೆ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಪಾಲ್ಗೊಂಡಿದ್ದ ವೇಳೆ ಆ ವ್ಯಕ್ತಿ ಕೊರೊನಾ ವೈರಸ್‌ಗೆ ತುತ್ತಾಗಿರಲಿಲ್ಲ ಎಂದು ಮೆಲ್ಬರ್ನ್ ಕ್ರಿಕೆಟ್ ಕ್ಲಬ್ ಹೇಳಿಕೆ ನೀಡಿದೆ.

ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಎಂಸಿಜಿ, ''ಕೊರೊನಾ ದೃಢಪಟ್ಟ ವ್ಯಕ್ತಿಗೆ ಬಾಕ್ಸಿಂಗ್ ಡೇ ಟೆಸ್ಟ್ ನಡೆದ ಸಂದರ್ಭದಲ್ಲಿ ಕೋವಿಡ್ ತಗುಲಿರಲಿಲ್ಲ. ಆದರೆ ಮುಂಜಾಗ್ರತೆ ಹಿನ್ನೆಲೆಯಲ್ಲಿ ಮೆಲ್ಬರ್ನ್ ಕ್ರಿಕೆಟ್ ಗ್ರೌಂಡ್‌ನ ಗ್ರೇಟ್ ಸೌತರ್ನ್ ಸ್ಟ್ಯಾಂಡ್‌ನ ಐದನೇ ವಲಯದಲ್ಲಿ ಡಿಸೆಂಬರ್ 27 ಭಾನುವಾರ 12:30 Pಒ ನಿಂದ 3:30ರ ಅವಧಿಯಲ್ಲಿ ಪಂದ್ಯವನ್ನು ವೀಕ್ಷಿಸುತ್ತಿದ್ದ ಎಲ್ಲರೂ ಕೊರೊನಾ ಪರೀಕ್ಷೆಗೆ ಒಳಪಡಬೇಕು ಹಾಗೂ ನೆಗೆಟಿವ್ ವರದಿ ಬರುವವರೆಗೆ ಐಸೋಲೇಶನ್‌ನಲ್ಲಿರಬೇಕು" ಎಂದು ತಿಳಿಸಿದೆ.

Edited By : Vijay Kumar
PublicNext

PublicNext

06/01/2021 11:28 am

Cinque Terre

35.18 K

Cinque Terre

0

ಸಂಬಂಧಿತ ಸುದ್ದಿ