ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಕರುಳು ಕಿತ್ತು ಬರುತ್ತಿದೆ': ಕೆಎಲ್ ಭಾವನಾತ್ಮಕ ಟ್ವೀಟ್

ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಇನ್ನೆರಡು ಪಂದ್ಯಗಳು ಬಾಕಿಯಿದ್ದು, ಕೆ.ಎಲ್.ರಾಹುಲ್ ಮತ್ತೆ ಟೆಸ್ಟ್‌ ಕ್ರಿಕೆಟ್‌ಗೆ ಪದಾರ್ಪಣೆ ಮಾಡುವ ನಿರೀಕ್ಷೆ ಮೂಡಿಸಿದ್ದರು. ಆದರೆ ಮೂರನೇ ಟೆಸ್ಟ್ ಪಂದ್ಯಕ್ಕೂ ಮುನ್ನವೇ ಗಾಯಕ್ಕೆ ಒಳಗಾಗಿ ತಂಡವನ್ನು ತೊರೆಯುವಂತಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕೆಎಲ್ ರಾಹುಲ್, "ತಂಡವನ್ನು ತೊರೆಯುವಂತಾಗಿರುವುದಕ್ಕೆ ಕರುಳು ಕಿತ್ತು ಬಂದಿದೆ. ಆದರೆ ಸರಣಿಯ ಉಳಿದೆರಡು ಪಂದ್ಯಗಳಲ್ಲಿ ಗೆಲುವು ನಮ್ಮದಾಗಲಿ ಎಂದು ತಂಡಕ್ಕೆ ಹಾರೈಸುತ್ತೇನೆ" ಎಂದು ತಿಳಿಸಿದ್ದಾರೆ.

ಏಕದಿನ ಹಾಗೂ ಟಿ20 ಸರಣಿಯಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿ ಮಿಂಚಿದರೂ ಕೆಎಲ್ ರಾಹುಲ್ ಅವರು ಟೆಸ್ಟ್‌ನಲ್ಲಿ ಆಡುವ 11ರ ಬಳಗದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದರು. ಕಳೆದ ಶನಿವಾರ ಮೆಲ್ಬರ್ನ್ ಕ್ರಿಕೆಟ್‌ ಗ್ರೌಂಡ್ (ಎಂಸಿಜಿ) ಕ್ರೀಡಾಂಗಣದಲ್ಲಿ ನೆಟ್ಸ್‌ನಲ್ಲಿ ಬ್ಯಾಟಿಂಗ್‌ ಅಭ್ಯಾಸ ಮಾಡುವಾಗ ರಾಹುಲ್‌ ತಮ್ಮ ಅಂಗೈಗೆ ಗಾಯ ಮಾಡಿಕೊಂಡಿದ್ದರು. ಇದೇ ಕಾರಣಕ್ಕೆ ಸರಣಿಯ ಉಳಿದೆರಡು ಪಂದ್ಯಗಳಿಂದ ಹೊರಗುಳಿಯಲಿದ್ದಾರೆ.

Edited By : Vijay Kumar
PublicNext

PublicNext

06/01/2021 05:55 pm

Cinque Terre

36.24 K

Cinque Terre

1