ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಈ ವಿಚಾರವನ್ನು ಸಾಮಾಜಿಕ ಜಾಲತಾಣದ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿರುವ ವಿರಾಟ್, ನಮಗೆ ಹೆಣ್ಣು ಮಗು ಜನಿಸಿದೆ. ತಾನು ತುಂಬಾ ಖುಷಿಯಾಗಿದ್ದೇನೆ. ತಾಯಿ ಹಾಗೂ ಮಗು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.
2017ರ ಡಿಸೆಂಬರ್‌ನಂದು ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಇಟಲಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಮೊದಲ ಮಗುವಿಗೆ ಅಪ್ಪನಾದ ಖುಷಿಯಲ್ಲಿ ವಿರಾಟ್ ಕೊಹ್ಲಿ ಇದ್ದಾರೆ.
PublicNext
11/01/2021 04:27 pm