ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಟೀಂ ಇಂಡಿಯಾಗೆ ಮತ್ತೆ ಆಘಾತ- ಆಸೀಸ್ ವಿರುದ್ಧದ 4ನೇ ಟೆಸ್ಟ್‌ನಿಂದ ಪ್ರಮುಖ ಬೌಲರ್ ಔಟ್

ಸಿಡ್ನಿ: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಮತ್ತೆ ಗಾಯದ ಆಘಾತಕ್ಕೆ ಒಳಗಾಗಿದೆ. ಗಾಯಾಳುಗಳ ಪಟ್ಟಿ ಬೆಳೆಯುತ್ತಲೇ ಹೋಗುತ್ತಿದ್ದು, ಆಸೀಸ್ ವಿರುದ್ಧದ ನಾಲ್ಕನೇ ಟೆಸ್ಟ್‌ ಪಂದ್ಯದಿಂದ ಪ್ರಮುಖ ಬೌಲರ್‌ ಹೊರ ಬಿದ್ದಿದ್ದಾರೆ.

ಭಾರತದ ಅನುಭವಿ ವೇಗದ ಬೌಲರ್‌ ಜಸ್‌ಪ್ರೀತ್ ಬೂಮ್ರಾ ಕಿಬ್ಬೊಟ್ಟೆ ಭಾಗದಲ್ಲಿ ನೋವಿಗೆ ಒಳಗಾಗಿದ್ದಾರೆ. ಇದರಿಂದಾಗಿ ಜನವರಿ 15ರಂದು ಬ್ರಿಸ್ಬೇನ್‌ನ ಗಬ್ಬಾ ಸ್ಟೇಡಿಯಂನಲ್ಲಿ ಆರಂಭವಾಗಲಿರುವ ಆಸೀಸ್‌ ವಿರುದ್ಧದ ನಾಲ್ಕನೇ ಮತ್ತು ಕೊನೆಯ ಟೆಸ್ಟ್‌ ಪಂದ್ಯ ಅಲಭ್ಯವಾಗಲಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಒಂದು ಡ್ರಾ ಆಗಿದ್ದು, 1-1ರಿಂದ ಸಮಬಲಗೊಂಡಿದೆ. ಹೀಗಾಗಿ ನಾಲ್ಕನೇ ಟೆಸ್ಟ್ ಕುತೂಹಲ ಮೂಡಿಸಿದೆ.

Edited By : Vijay Kumar
PublicNext

PublicNext

12/01/2021 03:45 pm

Cinque Terre

24.02 K

Cinque Terre

0

ಸಂಬಂಧಿತ ಸುದ್ದಿ