ಬ್ರಿಸ್ಬೇನ್: ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಹಾಗೂ ತಮ್ಮ ಪಾದಾರ್ಪಣೆಯ ಮೊದಲ ಟೆಸ್ಟ್ ಪಂದ್ಯದಲ್ಲೇ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಬೌಲಿಂಗ್ ಅಷ್ಟೇ ಅಲ್ಲದೆ ಬ್ಯಾಟಿಂಗ್‌ನಲ್ಲೂ ಅದ್ಭುತ ಪ್ರದರ್ಶನ ನೀಡಿ ಮಿಂಚಿದ್ದಾರೆ. ಜೊತೆಗೆ ವಿನೂತನವಾಗಿ ಸಿಕ್ಸ್ ಸಿಡಿಸಿ ಅಚ್ಚರಿ ಮೂಡಿಸಿದ್ದಾರೆ.
ಎಡಗೈ ಬ್ಯಾಟ್ಸ್ಮನ್ ಆಗಿರುವ ವಾಷಿಂಗ್ಟನ್ ಸುಂದರ್, ಆಸ್ಟ್ರೇಲಿಯಾದ ಆಫ್ ಸ್ಪಿನ್ನರ್ ನಥಾನ್ ಲಿಯಾನ್ ಅವರ ಎಸೆತವನ್ನು ಸಿಕ್ಸರ್ ಸಿಡಿಸಿದ್ದಾರೆ. ವಿಶೇಷವೆಂದರೆ ತಾವು ಹೊಡೆದ ಚೆಂಡು ಏನಾಯ್ತು ಎಂಬುದನ್ನು ಕೂಡ ಸುಂದರ್ ನೋಡಲಿಲ್ಲ. ಈ ಹೊಸ ಬಗೆಯ ಸಿಕ್ಸರ್ ಟ್ರೆಂಡ್ ಹುಟ್ಟುಹಾಕಿದೆ.
ಇದನ್ನು ನೋ ಲುಕ್ ಸಿಕ್ಸ್ ಎಂದು ಕರೆಯಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಅಷ್ಟು ಮಾತ್ರವಲ್ಲದೇ ಹೊಸ ಸಿಕ್ಸರ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಸುಂದರ್ ಈ ಇನ್ನಿಂಗ್ಸ್‌ನಲ್ಲಿ 144 ಎಸೆತಗಳಲ್ಲಿ 7 ಬೌಂಡರಿ, ಒಂದು ಸಿಕ್ಸರ್ ಸೇರಿ 62 ರನ್ ಚಚ್ಚಿದ್ದಾರೆ. ಇದಕ್ಕೂ ಮುನ್ನ ಆಸೀಸ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಮೂರು ವಿಕೆಟ್ ಪಡೆದಿದ್ದಾರೆ.
PublicNext
17/01/2021 08:14 pm