ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಾಜಿ ಕ್ರಿಕೆಟರ್‌ ಬಿ.ಎಸ್.ಚಂದ್ರಶೇಖರ್ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

ಬೆಂಗಳೂರು: ಟೀಂ ಇಂಡಿಯಾ ಮಾಜಿ ಕ್ರಿಕೆಟರ್‌ ಬಿ.ಎಸ್.ಚಂದ್ರಶೇಖರ್ ಅವರಿಗೆ ಅನಾರೋಗ್ಯ ಕಾಡಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘದ ವಕ್ತಾರ ಮಾಹಿತಿ ನೀಡಿದ್ದು, ''ಆಯಾಸ ಮತ್ತು ಉಸಿರಾಟದ ಸಮಸ್ಯೆಯಿಂದಾಗಿ ಬಿ.ಎಸ್.ಚಂದ್ರಶೇಖರ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ಆರೋಗ್ಯವಾಗಿದ್ದಾರೆ. ಚಿಕಿತ್ಸೆ ನಂತರ ಎರಡು ದಿನದಲ್ಲಿ ಮನೆಗೆ ಮರಳಲಿದ್ದಾರೆ'' ಎಂದು ತಿಳಿಸಿದ್ದಾರೆ ಎಂದು ವರದಿಯಾಗಿದೆ.

75ರ ಹರೆಯದ ಬಿ.ಎಸ್. ಚಂದ್ರಶೇಖರ್ ಅವರು ಮೈಸೂರು ಮೂಲದವರು. ಲೆಗ್ ಸ್ಪಿನ್ನರ್ ಆಗಿದ್ದ ಅವರು 1964ರಿಂದ 1979ರವರೆಗೆ ಭಾರತ ತಂಡವನ್ನು ಪ್ರತಿನಿಧಿಸಿದ್ದರು. ಭಾರತದ ಪರ 58 ಟೆಸ್ಟ್ ಪಂದ್ಯವಾಡಿದ್ದ ಅವರು, 242 ವಿಕೆಟ್ ಪಡೆದಿದ್ದರು. 60ರ ದಶಕದಲ್ಲಿ ಎರ್ರಪಳ್ಳಿ ಪ್ರಸನ್ನ, ಬಿಷನ್ ಸಿಂಗ್ ಬೇಡಿ ಮತ್ತು ಬಿ ಎಸ್ ಚಂದ್ರಶೇಖರ್ ಜೋಡಿ ಪ್ರಸಿದ್ಧವಾಗಿತ್ತು.

Edited By : Vijay Kumar
PublicNext

PublicNext

18/01/2021 11:52 am

Cinque Terre

60.69 K

Cinque Terre

5

ಸಂಬಂಧಿತ ಸುದ್ದಿ