ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆಸ್ಟ್ರೇಲಿಯಾ ವಿರುದ್ಧ ಸರಣಿ ಗೆದ್ದ ಟೀಂ ಇಂಡಿಯಾಗೆ ಪ್ರಧಾನಿ ಅಭಿನಂದನೆ

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯನ್ನು 2-1 ಅಂತರದಿಂದ ಗೆದ್ದ ಟೀಂ ಇಂಡಿಯಾ ತಂಡಕ್ಕೆ ಮೋದಿ ಅಭಿನಂದನೆ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, 'ಆಸ್ಟ್ರೇಲಿಯಾದಲ್ಲಿ ಭಾರತ ಕ್ರಿಕೆಟ್ ತಂಡದ ಯಶಸ್ಸಿನಿಂದ ನಾವೆಲ್ಲರೂ ಸಂಭ್ರಮಿಸಿದ್ದೇವೆ. ಅವರ ಗಮನಾರ್ಹ ಸಾಮರ್ಥ್ಯ ಮತ್ತು ಉತ್ಸಾಹವು ಸರಣಿಯುದ್ದಕ್ಕೂ ಗೋಚರಿಸಿತು. ಹಾಗೆಯೇ ಅವರ ಉದ್ದೇಶ, ಸ್ಥೈರ್ಯ ಹಾಗೂ ದೃಢ ನಿಶ್ಚಯ ಕೂಡ. ತಂಡಕ್ಕೆ ಅಭಿನಂದನೆಗಳು. ನಿಮ್ಮ ಮುಂದಿನ ಪ್ರಯತ್ನಗಳಿಗೂ ಶುಭಾಶಯಗಳು' ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಸರಣಿಯ ಮೊದಲ ಪಂದ್ಯವನ್ನು ಹೀನಾಯವಾಗಿ ಸೋತಿದ್ದ ಭಾರತ, ಎರಡನೇ ಪಂದ್ಯವನ್ನು ಗೆದ್ದು ತಿರುಗೇಟು ನೀಡಿತ್ತು. ಮೂರನೇ ಪಂದ್ಯ ಡ್ರಾ ನಲ್ಲಿ ಅಂತ್ಯ ಕಂಡರೆ ನಾಲ್ಕನೇ ಪಂದ್ಯವನ್ನು ಅಜಿಂಕ್ಯ ರಹಾನೆ ಪಡೆ ಗೆದ್ದುಕೊಂಡಿದೆ.

ಪ್ರಮುಖ ಆಟಗಾರರ ಅನುಪಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸಿದ ಅಜಿಂಕ್ಯ ರಹಾನೆ ಸರಣಿ ಯಶಸ್ಸಿನಲ್ಲಿ ಪ್ರಮುಖರಾಗಿದ್ದಾರೆ.

Edited By : Nirmala Aralikatti
PublicNext

PublicNext

19/01/2021 04:51 pm

Cinque Terre

71.3 K

Cinque Terre

3